
ಸ್ಟ್ಯಾನ್‌ಫೋರ್ಡ್: ಗೂಗಲ್ ಸಿಇಒ ಸುಂದರ್ ಪಿಚೈ ಸ್ಟ್ಯಾನ್‌ಫೋರ್ಡ್ ವಿವಿಯ ಘಟಿಕೋತ್ಸವದಲ್ಲಿ ಮುಖ್ಯ ಭಾಷಣ ಮಾಡುತ್ತಿದ್ದಾಗ ಸುಮಾರು 100-200 ವಿದ್ಯಾರ್ಥಿಗಳು ಸಭಾಂಗಣದಿಂದ ದಿಢೀರನೆ ಹೊರನಡೆದ ಘಟನೆ ನಡೆದಿದೆ. ಸ್ಟುಡೆಂಟ್ಸ್ ಫಾರ್ ಜಸ್ಟಿಸ್ ಇನ್ ಪ್ಯಾಲೆಸ್ಟೈನ್ ಹಾಗೂ ನೋ ಟೆಕ್ ಫಾರ್ ಅಪಾರ್ಥೈಡ್ ಎಂಬ ಗುಂಪಿನ ವಿದ್ಯಾರ್ಥಿಗಳು ಈ ಪ್ರತಿಭಟನೆಯನ್ನು ಆಯೋಜಿಸಿದ್ದರು ಎಂದು ತಿಳಿದುಬಂದಿದೆ.
ಪಿಚೈ ವಿದ್ಯಾರ್ಥಿಗಳನ್ನುದ್ದೇಶಿಸಿ ಎಐ, ತಂತ್ರಜ್ಞಾನ ಹಾಗೂ ವೈಯಕ್ತಿಕ ಜೀವನದ ಸಾಧನೆಗಳ ಬಗ್ಗೆ ಮಾತಾಡುತ್ತಿದ್ದರು. ಆಗ ಈ ಘಟನೆ ನಡೆದಿದ್ದು, ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಗೂಗಲ್ ಕಂಪನಿಯು ಇಸ್ರೇಲ್ ರಕ್ಷಣಾ ಪಡೆಗಳು, ಅಮೆರಿಕ ಗೃಹ ಸಚಿವಾಲಯ ಮತ್ತು ಇತರ ಸರ್ಕಾರಿ ಸಂಸ್ಥೆಗಳೊಂದಿಗೆ ಹಲವು ಒಪ್ಪಂದಗಳನ್ನು ಮಾಡಿಕೊಂಡಿದೆ. ಸರ್ಕಾರಿ ಕೆಲಸಗಳಲ್ಲಿ ಖಾಸಗಿ ಕಂಪನಿಗಳ ಸಹಭಾಗಿತ್ವದ ವಿರುದ್ಧ ಅಮೆರಿಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ವಿದ್ಯಾರ್ಥಿಗಳು ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ.
More than 100 Stanford University graduates walked out during Google CEO Sundar Pichai’s commencement address, chanting ‘Free Palestine,’ in protest over Project Nimbus, the company’s cloud contract with the Israeli government. pic.twitter.com/cuVDempBHk
— Al Jazeera English (@AJEnglish) June 15, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ