ಶ್ವೇತಭವನದಲ್ಲಿ ಪ್ರತಿಷ್ಠಿತ ಕಂಪನಿಗಳ ಸಿಇಒ ಜೊತೆ ಪ್ರಧಾನಿ ಮೋದಿ ಚರ್ಚೆ!

By Suvarna News  |  First Published Jun 23, 2023, 11:27 PM IST

ಭಾರತ ಹಾಗೂ ಅಮೆರಿಕದ ಟಾಪ್ ಕಂಪನಿಗಳ ಸಿಇಒ ಜೊತೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಶ್ವೇತಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಮೋದಿ ಹಲವು ಕುತೂಹಲ ವಿಷಯಗಳ ಕುರಿತು ಚರ್ಚಿಸಿದ್ದಾರೆ.


ವಾಶಿಂಗ್ಟನ್ ಡಿಸಿ(ಜೂ.23) ಪ್ರಧಾನಿ ನರೇಂದ್ರ ಇಂದು ಭಾರತ ಹಾಗೂ ಅಮೆರಿಕದ ಮುಂಚೂಣಿ ಕಂಪನಿಗಳ ಪ್ರತಿಷ್ಠಿತ ಸಿಇಒ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಶ್ವೇತಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜೊತೆ ಚರ್ಚೆ ನಡೆಸಿದ್ದಾರೆ. ಗೂಗಲ್ ಸಿಇಒ ಸುಂದರ್ ಪಿಚೈ, ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ, ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ, ಮಹೀಂದ್ರ ಚೇರ್ಮೆನ್ ಆನಂದ್ ಮಹೀಂದ್ರ ಸೇರಿದಂತೆ ಹಲವು ಸಿಇಒ ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ. 

ಸುಭದ್ರ ಭವಿಷ್ಯಕ್ಕಾಗಿ ತಂತ್ರಜ್ಞಾನ ಹಾಗೂ ಪ್ರತಿಭೆಯನ್ನು ಜೊತೆಗೂಡಿಸಿಬೇಕು. ತಂತ್ರಜ್ಞಾನವನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಬೇಕು. ಹವಾಮಾನ ಬದಲಾವಣೆ, ಬಡತನ ನಿರ್ಮೂಲನೆ, ಸಾಂಕ್ರಾಮಿಕ ರೋಗ ಸೇರಿದಂತೆ ಹಲವು ಸವಾಲುಗಳನ್ನು ಜೊತೆಯಾಗಿ ಎದುರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ. ತಂತ್ರಜ್ಞಾನದ ಮೂಲಕ ಅವಕಾಶ ಹಾಗೂ ವೇದಿಕೆಯನ್ನು ಸೃಷ್ಟಿಸಬೇಕು ಎಂದು ಮೋದಿ ಹೇಳಿದ್ದಾರೆ.

Tap to resize

Latest Videos

ಅಮೆರಿಕದಲ್ಲಿ ಮೋದಿಗೆ ಇಂದ್ರದೇವನ ಆಶೀರ್ವಾದ: ಮಳೆಯ ಆರ್ಭಟದ ನಡುವೆಯೂ ರಾಷ್ಟ್ರಗೀತೆಗೆ ‘ನಮೋ’ ಗೌರವ

ಇದಕ್ಕೂ ಮೊದಲು ಅಮೆರಿಕ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಜೊತೆ ಪ್ರಧಾನಿ ಮೋದಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಅಧಿಕೃತ ಭೇಟಿ ಉಭಯ ದೇಶಗಳ ನಡುವಿನ ಸಂಬಂಧವನ್ನು ಬಾಹ್ಯಾಕಾಶ, ರಕ್ಷಣೆ, ತಂತ್ರಜ್ಞಾನ ಮತ್ತು ಪೂರೈಕೆ ಕ್ಷೇತ್ರದಲ್ಲಿ ಮತ್ತೊಂದು ಹಂತಕ್ಕೆ ಕೊಂಡೊಯ್ಯಲಿದೆ ಎಂದು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು ‘ಅಮೆರಿಕ ಭಾರತ ಸಂಬಂಧ ಹಿಂದೆಂದಿಗಿಂತಲೂ ಸುಭದ್ರವಾಗಿದ್ದು, ನಮ್ಮ ಭವಿಷ್ಯವನ್ನು ಸಮೃದ್ಧ, ಸುಭದ್ರ ಹಾಗೂ ಆರೋಗ್ಯಕರವಾಗಿರಿಸಲು ಸಹಕಾರಿಯಾಗುತ್ತದೆ. ಭಾರತ ಅಮೆರಿಕ ಸಂಬಂಧ 21ನೇ ಶತಮಾನದಲ್ಲಿ ಬಹಳ ಮಹತ್ವವನ್ನು ಪಡೆದಿದೆ’ ಎಂದು ಹೇಳಿದ್ದಾರೆ.

 

PM Modi US Visit: ಭಾರತದ ಪ್ರಧಾನಿಗೆ 'ನಮೋ' ಎಂದ ಅಮೆರಿಕದ ರಾಜಕಾರಣಿಗಳು

ಅಮೆರಿಕ ಸಂಸತ್ತಿನಲ್ಲಿ ಭಾಷಣ ಮಾಡಿದ ಮೋದಿ, ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ ಎಂದಿದ್ದಾರೆ.  ಮೂಲಭೂತವಾದ ಮತ್ತು ಭಯೋತ್ಪಾದನೆ ಇಡೀ ವಿಶ್ವಕ್ಕೆ ಇನ್ನೂ ಅಪಾಯಕಾರಿಯಾಗಿಯೇ ಮುಂದುವರೆದಿದೆ. ಈ ಸಿದ್ದಾಂತಗಳು ಪದೇ ಪದೇ ತಮ್ಮ ಗುರುತು ಮತ್ತು ಮಾದರಿಯನ್ನು ಬದಲಿಸಿದರೂ, ಅವುಗಳ ಗುರಿ ಒಂದೇ ಆಗಿದೆ. ಉಗ್ರವಾದ ಮಾನವೀಯತೆಯ ಶತ್ರುವಾಗಿದೆ. ಹೀಗಾಗಿ ಅದರ ನಿಗ್ರಹದಲ್ಲಿ ಆದರೆ, ಹೋದರೆ ಎಂಬುದಕ್ಕೆ ಅವಕಾಶ ನೀಡಬಾರದು. ಭಯೋತ್ಪಾದನೆಯನ್ನು ಪ್ರಾಯೋಜಿಸುವ ಇಂಥ ಶಕ್ತಿಗಳ ವಿರುದ್ಧ ನಾವೆಲ್ಲಾ ಒಂದಾಗಿ ಹೋರಾಡಬೇಕಿದೆ ಎಂದಿದ್ದಾರೆ.

click me!