ಆಫ್ಘನ್‌ ರಕ್ಷಣಾ ಸಚಿವರ ಗುರಿಯಾಗಿಸಿ ದಾಳಿ: ಎಂಟು ಮಂದಿ ಸಾವು!

Published : Aug 05, 2021, 12:02 PM IST
ಆಫ್ಘನ್‌ ರಕ್ಷಣಾ ಸಚಿವರ ಗುರಿಯಾಗಿಸಿ ದಾಳಿ: ಎಂಟು ಮಂದಿ ಸಾವು!

ಸಾರಾಂಶ

* ಆಫ್ಘಾನಿಸ್ತಾನದ ಹಂಗಾಮಿ ರಕ್ಷಣಾ ಸಚಿವರನ್ನು ಗುರಿಯಾಗಿಸಿಕೊಂಡು ತಾಲಿಬಾನ್‌ ಉಗ್ರರ ದಾಳಿ * ಬಾಂಬ್‌ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಮೃತ, 20 ಮಂದಿಗೆ ಗಾಯ * ಬಿಸ್ಮಿಲ್ಲಾ ಖಾನ್‌ ಮುಹಮ್ಮದಿ ಅವರನ್ನು ಗುರಿಯಾಗಿಸಿ ಅವರ ಅತಿಥಿ ಗಹದ ಸಮೀಪ ಈ ದಾಳಿ   

ಕಾಬೂಲ್‌(ಆ.05): ಆಫ್ಘಾನಿಸ್ತಾನದ ಹಂಗಾಮಿ ರಕ್ಷಣಾ ಸಚಿವರನ್ನು ಗುರಿಯಾಗಿಸಿಕೊಂಡು ತಾಲಿಬಾನ್‌ ಉಗ್ರರು ನಡೆಸಿದ ಬಾಂಬ್‌ ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡ ಘಟನೆ ನಡೆದಿದೆ.

ಮಂಗಳವಾರ ಮಧ್ಯರಾತ್ರಿ ಸಚಿವ ಬಿಸ್ಮಿಲ್ಲಾ ಖಾನ್‌ ಮುಹಮ್ಮದಿ ಅವರನ್ನು ಗುರಿಯಾಗಿಸಿ ಅವರ ಅತಿಥಿ ಗಹದ ಸಮೀಪ ಈ ದಾಳಿ ನಡೆಸಲಾಗಿದೆ. ಆದರೆ ದಾಳಿ ವೇಳೆ ಅವರು ಸ್ಥಳದಲ್ಲಿರಲಿಲ್ಲ. ಹೀಗಾಗಿ ಸಚಿವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ದಾಳಿ ಬಳಿಕ ನಡೆದ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯ ಸಂಪೂರ್ಣ ಹೊಣೆಯನ್ನು ತಾಲಿಬಾನ್‌ ಹೊತ್ತುಕೊಂಡಿದೆ. ಇತ್ತೀಚಿಗೆ ಆಫ್ಘಾನ್‌ ಪಡೆ ವಿವಿಧ ಪ್ರಾಂತ್ಯಗಳಲ್ಲಿ ನಡೆಸಿದ ದಾಳಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗಿದೆ ಎಂದು ತಾಲಿಬಾನ್‌ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆಕಾಶಕ್ಕೇ ಕನ್ನಡಿ ಹಾಕಿ ರಾತ್ರಿಗೆ ಗುಡ್‌ ಬೈ ಸಾಹಸ!
PUBG ಗೇಮ್​ನಿಂದ 6ನೇ ಮಗುವಿನತ್ತ ಪಯಣ: ಅಕ್ರಮವಾಗಿ ಭಾರತಕ್ಕೆ ಬಂದಿದ್ದಾಕೆ ಮತ್ತೊಮ್ಮೆ ಗರ್ಭಿಣಿ!