
ನ್ಯೂಯಾರ್ಕ್ (ಆ.06): ದಿನಕ್ಕೊಂದು ಹೇಳಿಕೆ ಮೂಲಕ ತುಘಲಕ್ ನೀತಿ ಪಾಲಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮತ್ತದೇ ಕೆಲಸ ಮಾಡಿದ್ದಾರೆ. ರಷ್ಯಾದಿಂದ ತೈಲ ಆಮದು ನಿಲ್ಲಿಸದಿದ್ದರೆ, ಭಾರತದ ಮೇಲೆ ಈಗಾಗಲೇ ಘೋಷಿಸಿರುವ ಶೇ.25ರಷ್ಟು ಸುಂಕವನ್ನು ಮತ್ತಷ್ಟು ಏರಿಸುವುದಾಗಿ ಬೆದರಿಕೆ ಒಡ್ಡಿದ್ದ ಟ್ರಂಪ್, 24 ಗಂಟೆಯ ಒಳಗೆ ಆ ನಿರ್ಧಾರವನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಭಾರತ ಅತಿ ಹೆಚ್ಚು ತೆರಿಗೆ ವಿಧಿಸುವ ರಾಷ್ಟ್ರವಾಗಿದೆ. ಅವರ ತೆರಿಗೆ ಅತಿ ಹೆಚ್ಚಾಗಿರುವುದರಿಂದ ನಾವು ಅವರೊಂದಿಗೆ ಅತ್ಯಂತ ಕಡಿಮೆ ವ್ಯವಹಾರ ನಡೆಸುತ್ತೇವೆ. ಅವರು ಅತಿ ಗರಿಷ್ಠ ತೆರಿಗೆ ವಿಧಿಸುವ ಕಾರಣ ನಾವು ಅವರ ಮೇಲೆ ಶೇ.25ರಷ್ಟು ತೆರಿಗೆ ನಿಗದಿಪಡಿಸಿದ್ದೆವು. ಆದರೆ ಮುಂದಿನ 24 ಗಂಟೆಗಳಲ್ಲಿ ನಾನು ಅದನ್ನು ಗಣನೀಯವಾಗಿ ಹೆಚ್ಚಿಸಲಿದ್ದೇನೆ. ಏಕೆಂದರೆ ಅವರು ರಷ್ಯಾದ ತೈಲವನ್ನು ಖರೀದಿಸುತ್ತಿದ್ದಾರೆ.
ಯುದ್ಧ ಯಂತ್ರಕ್ಕೆ ಅವರು ಇಂಧನ ಪೂರೈಸುತ್ತಿದ್ದಾರೆ. ಅವರು ಅದನ್ನು ಮುಂದುವರಿಸಿದರೆ ನನಗೆ ಸಂತೋಷವಾಗುವುದಿಲ್ಲ ಎಂದಿದ್ದಾರೆ. ಭಾರತ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸದಿದ್ದರೆ, ತೆರಿಗೆಯನ್ನು ಇತ್ತಷ್ಟು ಏರಿಸುವುದಾಗಿ ಸೋಮವಾರವಷ್ಟೇ ಟ್ರಂಪ್ ಬೆದರಿಕೆ ಹಾಕಿದ್ದರು. ಇದೀಗ 24 ಗಂಟೆಯೊಳಗೆ ಅದನ್ನು ಜಾರಿಗೆ ತರಲು ಮುಂದಾಗಿದ್ದಾರೆ.
ಎಚ್ಚರಿಕೆಗಳ ಹೊರತಾಗಿಯೂ ರಷ್ಯಾದಿಂದ ಭಾರತ ತೈಲ ಖರೀದಿಯನ್ನು ಮುಂದುವರೆಸಿದೆ. ರಷ್ಯಾ ದಾಳಿಯಿಂದ ಉಕ್ರೇನ್‌ನಲ್ಲಿ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂಬ ಬಗ್ಗೆ ಭಾರತ ತಲೆಕೆಡಿಸಿಕೊಳ್ಳುವುದಿಲ್ಲ. ಆದ್ದರಿಂದ ಅವರ ಆಮದುಗಳ ಮೇಲಿನ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಏರಿಸುತ್ತೇನೆ.
- ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ