ವಾಷಿಂಗ್ಟನ್: ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಐಷಾರಾಮಿ ಟೆಸ್ಲಾ ಕಾರಿನಲ್ಲಿ ಹೋಗುತ್ತಿದ್ದಾಗ ಉದ್ದೇಶಪೂರ್ವಕವಾಗಿಯೇ ಕಾರನ್ನು ರಭಸವಾಗಿ ಚಲಾಯಿಸಿ ಎತ್ತರದ ಪ್ರದೇಶದಿಂದ 250-300 ಅಡಿ ಕೆಳಗೆ ಬೀಳಿಸಿದ್ದಾನೆ. ಆದರೆ ಘಟನೆಯಲ್ಲಿ ಎಲ್ಲರೂ ಸುದೈವವಶಾತ್ ಪಾರಾಗಿದ್ದಾರೆ. ಇದೆ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಕೊಲೆ ಯತ್ನ ಹಾಗೂ ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ ಆರೋಪದಡಿ ಕಾರು ಚಾಲನೆ ಮಾಡುತ್ತಿದ್ದ ಧರ್ಮೇಶ್ ಎ ಪಟೇಲ್ ಎಂಬಾತನನ್ನು ಬಂಧಿಸಲಾಗಿದೆ. ಘಟನೆ ಬಳಿಕ ಕೂಡಲೇ ಕಾರಿನಲ್ಲಿದ್ದ 4 ವರ್ಷದ ಹೆಣ್ಣು ಮತ್ತು 9 ವರ್ಷದ ಗಂಡು ಮಕ್ಕಳು ಸೇರಿ ದಂಪತಿಯನ್ನು ರಕ್ಷಿಸಲಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗಿದೆ. ಇಷ್ಟುಎತ್ತರದಿಂದ ಕಾರು ಬಿದ್ದರೂ ಪ್ರಾಣಾಪಾಯದಿಂದಾಗಿ ಪಾರಾಗಿದ್ದು ಆಶ್ಚರ್ಯವೆಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಆದರೆ ಧರ್ಮೇಶ್ ವರ್ತನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹಿಮ ಸರೋವರದ ಮೇಲೆ ಫೋಟೋ ತೆಗೆಯಲು ಹೋಗಿ ಮೂವರು NRIಗಳು ಸಾವು
Mumbai News: ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾದ ಎನ್‌ಆರ್‌ಐ ಉದ್ಯಮಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ