ಈಜಿಫ್ಟ್ ವಿಶೇಷ ಸೇನೆಯ ಮಾಜಿ ಮುಖ್ಯಸ್ಥ ಈಗ ಅಲ್‌ಖೈದಾ ನಾಯಕ

Published : Feb 17, 2023, 12:58 PM ISTUpdated : Feb 17, 2023, 12:59 PM IST
ಈಜಿಫ್ಟ್ ವಿಶೇಷ ಸೇನೆಯ ಮಾಜಿ ಮುಖ್ಯಸ್ಥ ಈಗ ಅಲ್‌ಖೈದಾ ನಾಯಕ

ಸಾರಾಂಶ

ಈಜಿಫ್ಟ್ ವಿಶೇಷ ಸೇನಾಪಡೆಯ ಮಾಜಿ ಮುಖ್ಯಸ್ಥ ಸೈಫ್‌ ಅಲ್‌ ಅದಲ್‌, ಕುಖ್ಯಾತ ಉಗ್ರ ಸಂಘಟನೆ ಅಲ್‌ಖೈದಾದ (al-Qaeda) ಪ್ರಶ್ನಾತೀತ ನಾಯಕನಾಗಿದ್ದಾನೆ ಎಂದು ವಿಶ್ವಸಂಸ್ಥೆ ಗುರುವಾರ ಹೇಳಿದೆ.

ದುಬೈ: ಈಜಿಫ್ಟ್ ವಿಶೇಷ ಸೇನಾಪಡೆಯ ಮಾಜಿ ಮುಖ್ಯಸ್ಥ ಸೈಫ್‌ ಅಲ್‌ ಅದಲ್‌, ಕುಖ್ಯಾತ ಉಗ್ರ ಸಂಘಟನೆ ಅಲ್‌ಖೈದಾದ (al-Qaeda) ಪ್ರಶ್ನಾತೀತ ನಾಯಕನಾಗಿದ್ದಾನೆ ಎಂದು ವಿಶ್ವಸಂಸ್ಥೆ ಗುರುವಾರ ಹೇಳಿದೆ. ಅಲ್‌ಖೈದಾದ ಹಿಂದಿನ ಮುಖ್ಯಸ್ಥ ಅಲ್‌ ಜವಾಹಿರಿ (al-Zawahiri) ಅಮೆರಿಕದ ಕ್ಷಿಪಣಿ ದಾಳಿಯಲ್ಲಿ ಕಳೆದ ವರ್ಷ ಕಾಬೂಲ್‌ನಲ್ಲಿ ಮೃತಪಟ್ಟನಂತರ ಸಂಘಟನೆ ಯಾವುದೇ ಉತ್ತರಾಧಿಕಾರಿಯನ್ನು ಘೋಷಿಸಿರಲಿಲ್ಲ. ಇದೀಗ ಭೀಕರ ದುಷ್ಕೃತ್ಯಗಳನ್ನು ಯೋಜಿಸಬಲ್ಲ ಹಾಗೂ ಜಿಹಾದಿ ಜಾಲ ಹೊಂದಿರುವ ಅದಲ್‌ನನ್ನು ನಾಯಕನನ್ನಾಗಿ ಘೋಷಿಸಲಾಗಿದೆ ಎನ್ನಲಾಗಿದೆ. ತಾಂಜೇನಿಯಾ ಮತ್ತು ಕೀನ್ಯಾದಲ್ಲಿರುವ ಅಮೆರಿಕ ರಾಯಭಾರ ಕಚೇರಿಗಳ ಮೇಲೆ ನಡೆದ ಬಾಂಬ್‌ ದಾಳಿಯ ಪ್ರಮುಖ ರುವಾರಿಯಾಗಿದ್ದ ಅದಲ್‌ ಮಾಹಿತಿ ನೀಡಿದವರಿಗೆ ಅಮೆರಿಕ 82 ಕೋಟಿ ರು. ಬಹುಮಾನ ಘೋಷಿಸಿದೆ.

ಅಲ್‌ಖೈದಾ ನಂಟು: 2 ಶಂಕಿತ ಉಗ್ರರ ವಿರುದ್ಧ ಚಾರ್ಜ್‌ಶೀಟ್‌

ಜಾಗತಿಕ ಉಗ್ರ ಸಂಘಟನೆ ಅಲ್‌ ಖೈದಾ ಜತೆ ಸಂಪರ್ಕ ಹೊಂದಿದ್ದ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರು ನಗರದ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಜ.21 ರಂದು ದೋಷಾರೋಪಪಟ್ಟಿ ಸಲ್ಲಿಸಿತ್ತು. ಅಸ್ಸಾಂ ಮೂಲದ ಅಖ್ತರ್‌ ಹುಸೇನ್‌ ಮತ್ತು ಸೇಲಂ ಮೂಲದ ಅಬ್ದುಲ್‌ ಮಂಡಲ್‌ ಅಲಿಯಾಸ್‌ ಜುಬಾ ವಿರುದ್ಧ ಎನ್‌ಐಎ ಅಧಿಕಾರಿಗಳು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. 

ಫುಡ್‌ ಡಿಲವರಿ ಬಾಯ್‌ ಸೋಗಿನಲ್ಲಿ ಬಿಟಿಎಂ ಲೇಔಟ್‌ನಲ್ಲಿ ಅಡಗಿದ್ದ ಅಸ್ಸಾಂ ಮೂಲದ ಅಖ್ತರ್‌ ಹುಸೇನ್‌ನನ್ನು 2022ರ ಜುಲೈ 24ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಈತ ನೀಡಿದ ಮಾಹಿತಿ ಮೇರೆಗೆ ತಮಿಳುನಾಡಿನ ಸೇಲಂನಲ್ಲಿ ಅಬ್ದುಲ್‌ ಮಂಡಲ್‌ ಸೆರೆ ಸಿಕ್ಕಿದ್ದ. ತನಿಖೆ ವೇಳೆ ಈ ಇಬ್ಬರು ಅಲ್‌ ಖೈದಾ ಉಗ್ರ ಸಂಘಟನೆಗೆ ಸದಸ್ಯರ ನೇಮಕಾತಿಯಲ್ಲಿ ಸಕ್ರಿಯವಾಗಿರುವ ಬಯಲಾಗಿತ್ತು. ಈ ಸಂಬಂಧ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೆಚ್ಚಿನ ತನಿಖಾಗಿ ಎನ್‌ಐಎ ಅಧಿಕಾರಿಗಳು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ತನಿಖೆಗೆ ಇಳಿದಿದ್ದರು.

ಹಿಂದೂಗಳನ್ನು ಓಡಿಸಿ ಎಂದು ಅರಬ್‌ ದೇಶಗಳಿಗೆ ಅಲ್‌ಖೈದಾ ಕರೆ: ಪ್ರಧಾನಿ ಮೋದಿ, ನೂಪುರ್‌ ಗುರಿಯಾಗಿಸಿ ಲೇಖನ ಪ್ರಕಟ

ಈ ಇಬ್ಬರು ಶಂಕಿಯ ಉಗ್ರರು ಅಲ್‌ ಖೈದಾ ಸಂಘಟನೆ ಸೇರ್ಪಡೆಗಾಗಿ ಅಪ್ಘಾನಿಸ್ತಾನಕ್ಕೆ ತೆರಳಲು ಸಜ್ಜಾಗಿದ್ದರು. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಲ್‌ ಖೈದಾ ಉಗ್ರರ ಸಂಪರ್ಕ ಸಾಧಿಸಿ, ಚಾಟ್‌ ಮಾಡುತ್ತಿದ್ದರು. ಜಾಲತಾಣದಲ್ಲಿ ಜಿಹಾದ್‌ ಬಗ್ಗೆ ಪೋಸ್ಟ್‌ ಹಾಕುತ್ತಿದ್ದರು. ಜಿಹಾದ್‌ನಲ್ಲಿ ಭಾಗಿಯಾಗುವಂತೆ ಸಮುದಾಯದ ಯುವಕರನ್ನು ಹುರಿದುಂಬಿಸುತ್ತಿದ್ದರು ಎಂಬುದು ಎನ್‌ಐಎ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಶಂಕಿತ ಅಲ್‌ಖೈದಾ ಉಗ್ರನನ್ನು ಬಂಧಿಸಿದ ಎನ್‌ಐಎ! 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಸ್ವಸ್ಥ ಖಲೀದಾ ಜಿಯಾ ಹೆಚ್ಚಿನ ಚಿಕಿತ್ಸೆಗೆ ನಾಳೆ ಲಂಡನ್‌ಗೆ
ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!