
ಮಾಸ್ಕೋ: ರಷ್ಯಾದಿಂದ ಭಾರತಕ್ಕೆ ರಫ್ತಾಗುವ ರಸಗೊಬ್ಬರ ಪ್ರಮಾಣವು 2025ರ ಮೊದಲ 6 ತಿಂಗಳಲ್ಲಿ ಶೇ.20ರಷ್ಟು ಏರಿಕೆಯಾಗಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಭಾರತದ ರಸಗೊಬ್ಬರ ಆಮದಿನ ಪ್ರಮಾಣದಲ್ಲಿ ರಷ್ಯಾದ ಪಾಲು ಶೇ.33ರಷ್ಟಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ‘ಮೊದಲ 6 ತಿಂಗಳಿನಲ್ಲಿ ರಷ್ಯಾದ ರಫ್ತು 4 ಲಕ್ಷ ಟನ್ ಏರಿಕೆಯಾಗಿ, 25 ಲಕ್ಷ ಟನ್‌ಗೆ ತಲುಪಿದೆ. ಇದು ಶೇ.20ರಷ್ಟು ಏರಿಕೆಯಾಗಿದೆ. ಭಾರತದ ರೈತರ ಬೇಡಿಕೆಗಳನ್ನು ರಷ್ಯಾದ ಉತ್ಪಾದಕರು ಯಶಸ್ವಿಯಾಗಿ ಪೂರೈಸುತ್ತಿದ್ದಾರೆ. ಪಶ್ಚಿಮದ ನಿಷೇಧದ ಬಳಿಕ ಭಾರತವು ರಷ್ಯಾದ ಅತ್ಯಾಪ್ತವಾಗಿದೆ’ ಎಂದು ತಿಳಿಸಿದರು.
* ಡಿಸೆಂಬರ್‌ನಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ?
ನವದೆಹಲಿ: ರಷ್ಯಾ ಜತೆಗಿನ ತೈಲ ವ್ಯವಹಾರದ ಕಾರಣದಿಂದ ಅಮೆರಿಕ - ಭಾರತ ನಡುವಿನ ಸಂಬಂಧದಲ್ಲಿ ಉದ್ವಿಗ್ನತೆ ನಡುವೆಯೇ ಡಿಸೆಂಬರ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡುವುದು ಖಚಿತವಾಗಿದೆ.
ಕ್ರೆಮ್ಲಿನ್ ಸಹಾಯಕ ಯೂರಿ ಉಷಕೋವ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ ಸೋಮವಾರ ಚೀನಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ ( ಎಸ್‌ಸಿಒ) ಶೃಂಗಸಭೆಯಲ್ಲಿ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಆಗಲಿದ್ದಾರೆ. ಅಲ್ಲಿ ಅವರು ಡಿಸೆಂಬರ್ ಭೇಟಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ’ ಎಂದಿದ್ದಾರೆ.
ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ