ಉಗ್ರರಿಂದ ಮಾಲಿಯಲ್ಲಿ ಮೂವರು ಭಾರತೀಯ ಕಾರ್ಮಿಕರ ಅಪಹರಣ!

Published : Jul 03, 2025, 08:38 AM ISTUpdated : Jul 03, 2025, 08:45 AM IST
Kidnap

ಸಾರಾಂಶ

ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಭಾರತೀಯ ಕಾರ್ಮಿಕರನ್ನು ಅಪಹರಿಸಲಾಗಿದೆ. ಅಲ್-ಖೈದಾ ಜೊತೆ ಸಂಪರ್ಕ ಹೊಂದಿರುವ ಭಯೋತ್ಪಾದಕರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಭಾರತ ಸರ್ಕಾರ ಕಾರ್ಮಿಕರ ಬಿಡುಗಡೆಗೆ ಪ್ರಯತ್ನಿಸುತ್ತಿದೆ.

ನವದೆಹಲಿ: ಮಾಲಿಯ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಭಾರತೀಯ ಕಾರ್ಮಿಕರನ್ನು ಅಪಹರಿಸಲಾಗಿದೆ. ಉಗ್ರ ಸಂಘಟನೆಯಾಗಿರುವ ಅಲ್-ಖೈದಾ ಜೊತೆ ಸಂಪರ್ಕ ಹೊಂದಿರುವ ಭಯೋತ್ಪಾದಕರು ಮೂವರು ಭಾರತೀಯರನ್ನು ಅಪಹರಿಸಿದ್ದಾರೆ ಎಂದು ವರದಿಯಾಗಿದೆ. ಮೂವರು ಭಾರತೀಯರು ಅಪಹರಣವಾಗಿರೋದನ್ನು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಪಶ್ಚಿಮ ಆಫ್ರಿಕಾದ ಮಾಲಿಯ ಹಲವು ಭಾಗಗಳಲ್ಲಿ ಸರಣಿ ಭಯೋತ್ಪಾದಕ ದಾಳಿಗಳು ನಡೆದಿವೆ. ಭಾರತೀಯರ ಅಪಹರಕಣಕ್ಕೆ ಭಾರತ ಕಳವಳ ವ್ಯಕ್ತಪಡಿಸಿದ್ದು, ಮೂವರು ಕಾರ್ಮಿಕರ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳುವಂತೆ ಮಾಲಿ ಸರ್ಕಾರವನ್ನು ಕೇಳಿದೆ.

ಭಾರತದ ಮೂವರು ಕಾರ್ಮಿಕರು ಸುರಕ್ಷತೆ ಬಗ್ಗೆ ಖಚಿತ ಮಾಹಿತಿಯನ್ನು ನೀಡುವಂತೆ ಭಾರತ ಸರ್ಕಾರ ಸಂದೇಶವನ್ನು ರವಾನಿಸಿದೆ. ಅಪಹರಣಕ್ಕೊಳಗಾದ ಮೂವರು ಕೇಯ್ಸ್‌ನಲ್ಲಿರುವ ಡೈಮಂಡ್ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಮಿಕರ ಬಿಡುಗಡೆ ಬಗ್ಗೆ ಯಾವೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ವಿದೇಶಾಂಗ ಸಚಿವಾಲಯ (MEA) ಕೇಳಿದೆ.

ಜುಲೈ 1 ರಂದು ಅಪಹರಣ

ಜುಲೈ 1 ರಂದು ಶಸ್ತ್ರಸಜ್ಜಿತ ದಾಳಿಕೋರರ ಗುಂಪೊಂದು ಕೇಯ್ಸ್‌ನಲ್ಲಿರುವ ಡೈಮಂಡ್ ಸಿಮೆಂಟ್ ಕಾರ್ಖಾನೆ ಆವರಣದ ಮೇಲೆ ಸಂಘಟಿತ ದಾಳಿ ನಡೆಸಿತ್ತು. ಈ ವೇಳೆ ಮೂವರು ಭಾರತೀಯ ನಾಗರಿಕರನ್ನು ಬಲವಂತವಾಗಿ ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈವರೆಗೆ ಯಾವುದೇ ಸಂಘಟನೆ ಅಥವಾ ವ್ಯಕ್ತಿ ಮೂವರು ಕಾರ್ಮಿಕರ ಅಪಹರಣಗಳ ಹೊಣೆಯನ್ನು ಹೊತ್ತುಕೊಂಡಿಲ್ಲ. ಅಲ್-ಖೈದಾಗೆ ಸಂಬಂಧಿಸಿದ ಜಮಾತ್ ನುಸ್ರತ್ ಅಲ್-ಇಸ್ಲಾಂ ವಾಲ್-ಮುಸ್ಲಿಮೀನ್ (ಜೆಎನ್‌ಐಎಂ) ಮಂಗಳವಾರ ನಡೆದ ದಾಳಿಗಳ ಹೊಣೆಯನ್ನು ಹೊತ್ತುಕೊಂಡಿದೆ. ಹಾಗಾಗಿ ಈ ಅಪಹರಣವನ್ನು ಇವರೇ ಮಾಡಿರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಬಮಾಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಬಂಧಪಟ್ಟ ಅಧಿಕಾರಿಗಳು, ಪೊಲೀಸ್ ಮತ್ತು ಡೈಮಂಡ್ ಸಿಮೆಂಟ್ ಕಾರ್ಖಾನೆಯ ಆಡಳಿತ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಅಪಹೃತ ಭಾರತೀಯರ ಕುಟುಂಬದವರೊಂದಿಗೂ ರಾಯಭಾರ ಕಚೇರಿ ಸಂಪರ್ಕದಲ್ಲಿದೆ.

“ಕೇಂದ್ರ ಸರ್ಕಾರ ಈ ಹೇಯ ಕೃತ್ಯವನ್ನು ಖಂಡಿಸುತ್ತದೆ. ಅಪಹೃತ ಭಾರತೀಯ ನಾಗರಿಕರ ಸುರಕ್ಷಿತ ಮತ್ತು ಶೀಘ್ರ ಬಿಡುಗಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾಲಿ ಸರ್ಕಾರವನ್ನು ಒತ್ತಾಯಿಸುತ್ತದೆ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುರುಷರ ಕೊರತೆ: ಈ ದೇಶದಲ್ಲಿ ಗಂಡನ ಬಾಡಿಗೆಗೆ ಪಡೆಯುತ್ತಾರೆ ಹೆಣ್ಣು ಮಕ್ಕಳು
ಅಸ್ವಸ್ಥ ಖಲೀದಾ ಜಿಯಾ ಹೆಚ್ಚಿನ ಚಿಕಿತ್ಸೆಗೆ ನಾಳೆ ಲಂಡನ್‌ಗೆ