
ಲಂಡನ್: ಬ್ರಿಟನ್‌ನ ಶಾಲೆಗಳಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಇಸ್ಲಾಂಗೆ ಮತಾಂತರ ಆಗುವಂತೆ ಪ್ರಯತ್ನ ಮಾಡಲಾಗುತ್ತಿದೆ. ಮತಾಂತರ ಆಗಿ ಇಲ್ಲವೇ ನರಕಕ್ಕೆ ಹೋಗಿ ಎಂಬ ಬೆದರಿಕೆಯನ್ನೂ ಹಾಕಲಾಗುತ್ತಿದೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಹೆನ್ಸಿ ಜಾಕ್ಸನ್ ಸೊಸೈಟಿ ಎಂಬ ಸ್ಥಳೀಯ ಚಿಂತಕರ ಚಾವಡಿಯೊಂದು ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಶಗಳಿವೆ.
ಬ್ರಿಟನ್‌ನಲ್ಲಿರುವ ಶಾಲೆಗಳಲ್ಲಿ ಹಿಂದೂ ದ್ವೇಷದ ಘಟನೆಗಳು ನಡೆಯುತ್ತಿವೆ. ಒಂದು ಪ್ರಕರಣದಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಗೋಮಾಂಸ (Beef meat) ಬಿಸಾಡಲಾಗಿದೆ. ಕೆಲವು ಶಾಲೆಗಳಲ್ಲಿ ಹಿಂದೂ ಧರ್ಮದ (Hindu Dharma) ಕುರಿತಾಗಿ ಬೋಧಿಸುವುದನ್ನು ಕೆಲವರು ವಿರೋಧಿಸಿದ್ದು, ಧಾರ್ಮಿಕ ತಾರತಮ್ಯ ಮಾಡುತ್ತಿದ್ದಾರೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ ಶೇ.51ರಷ್ಟುಪೋಷಕರು ತಮ್ಮ ಮಕ್ಕಳು ಹಿಂದೂ ದ್ವೇಷಕ್ಕೆ ತುತ್ತಾಗಿರುವುದಾಗಿ ಹೇಳಿದ್ದಾರೆ ಎಂದು ವರದಿ ಬಿಡುಗಡೆ ಮಾಡಿದ ಚಿಂತಕ ಹೆನ್ರಿ ಜಾಕ್ಸನ್ (Henry jackson) ಹೇಳಿದ್ದಾರೆ. ಅಲ್ಲದೆ ಕೆಲ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳಿಗೆ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯ್ಕನ ವಿಡಿಯೋ ನೋಡುವಂತೆ ಬಲವಂತ ಮಾಡಿರುವ ಘಟನೆಗಳೂ ನಡೆದಿವೆ ಎಂದು ಹೇಳಿದ್ದಾರೆ.
ಮೊದಲ ರೋಜಾದ ವೀಡಿಯೋ ಶೇರ್ ಮಾಡಿದ ರಾಖಿ ಸಾವಂತ್, ಕಾಲೆಳೆದ ನೆಟ್ಟಿಗರು!
Vivian Dsena: 'ಮತಾಂತರವಾಗಿದ್ದೇನೆ, ಪ್ರಶ್ನೆ ಕೇಳಬೇಡಿ ಪ್ಲೀಸ್...' ಎಂದ ನಟ ವಿವಿಯನ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ