
ಯುಎಇ(ಫೆ.13) ದ್ವಿಪಕ್ಷೀಯ ಮಾತುಕತೆ, ವಿಶ್ವ ಸರ್ಕಾರಿ ಶೃಂಗಸಭೆ, ಭವ್ಯ ಹಿಂದೂ ದೇಗುಲ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳ ನಿಮಿತ್ತ ಯುಎಇ ಹಾಗೂ ಖತಾರ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿಯನ್ನು ಅದ್ಧೂರಿ ಹಾಗೂ ಆತ್ಮೀಯವಾಗಿ ಸ್ವಾಗತಿಸಲಾಗಿದೆ. ಯುಎಇ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಝ್ಯಾಯದ್ ಅಲ್ ನಹ್ಯಾನ್ ಮೋದಿಯನ್ನು ಆತ್ಮೀಯವಾಗಿ ಆಲಿಂಗಿಸಿ ಬರಮಾಡಿಕೊಂಡಿದ್ದಾರೆ. ಬಳಿಕ ಮೋದಿಗೆ ಗಾರ್ಡ್ ಆಫ್ ಹಾನರ್ ಗೌರವ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಯುಎಇ ಹಾಗೂ ಖತಾರ್‌ಗೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಫೆಬ್ರವರಿ 13 ಹಾಗೂ 14 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಹಾಗೂ 14, 15ರಂದು ಕತಾರ್ ಭೇಟಿ ನೀಡುತ್ತಿದ್ದಾರೆ. ದೆಹಲಿಯಿಂದ ಯುಎಇಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಅಧ್ಯಕ್ಷ ಶೇಕ್ ಮೊಹಮ್ಮದ್ ಸ್ವಾಗತಿಸಿದ್ದಾರೆ.
ಮುಸ್ಲಿಂ ರಾಷ್ಟ್ರ ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನದ ಅತ್ಯಾಕರ್ಷಕ ಒಳಾಂಗಣ ಚಿತ್ರಗಳು!
ಶೇಕ್ ಮೊಹಮ್ಮದ್ ಜೊತೆ ಭಾರತ ಹಾಗೂ ಯುಎಐ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಕುರಿತು ಚರ್ಚೆ ನಡೆಸಲಿದ್ದಾರೆ. ಇನ್ನು ಫೆ 14 ರಂದು ದುಬೈನಲ್ಲಿ ನಡೆಯಲಿರುವ ವಿಶ್ವ ಸರ್ಕಾರಿ ಶೃಂಗಸಭೆಯಲ್ಲಿ ವಿಶ್ವ ನಾಯಕರ ಸಭೆಯನ್ನುದ್ದೇಶಿ ಮೋದಿ ಮಾತನಾಡಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಯು.ಎ.ಇ.ಯ ಪ್ರಧಾನಮಂತ್ರಿ ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ರಶೀದ್ ಅವರ ಜೊತೆಗೆ ಮೋದಿ ಚರ್ಚೆ ನಡೆಸಲಿದ್ದಾರೆ.
ಇದೇ ದಿನ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನಿರ್ಮಾಣಗೊಂಡಿರುವ ದೇಶದ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 1 ರಿಂದ ಈ ಮಂದಿರ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಯುಎಇಯ ಬಿಎಪಿಎಸ್ ಸ್ವಾಮಿ ನಾರಾಯಣ ಅಬುಧಾಬಿಯಲ್ಲಿ 27 ಎಕರೆ ಪ್ರದೇಶದಲ್ಲಿ ಬೃಹತ್ ಹಿಂದೂ ದೇವಸ್ಥಾನವೊಂದನ್ನು ನಿರ್ಮಿಸಿದೆ. ಇಲ್ಲಿ ಕೃಷ್ಣ- ರಾಧೆ, ಶಿವ- ಪಾರ್ವತಿ ಮತ್ತು ಸೀತೆ, ರಾಮ, ಲಕ್ಷ್ಮಣ ಹಾಗೂ ಹನುಮಂತ ಸೇರಿ ಬಹುತೇಕ ಎಲ್ಲ ಹಿಂದೂ ದೇವರುಗಳನ್ನು ಪೂಜಿಸಲಾಗುತ್ತದೆ.
ಫೆ.13ರಂದು ಅಬುಧಾಬಿಯಲ್ಲಿ 'ಅಹ್ಲಾನ್ ಮೋದಿ' ಕಾರ್ಯಕ್ರಮ; ಪ್ರಧಾನಿ ಮೋದಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಅಬುಧಾಬಿಯಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಯು.ಎ.ಇ.ಯ ಎಲ್ಲಾ ಎಮಿರೇಟ್ಸ್ ನ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ