ಪ್ರಧಾನಿ ಮೋದಿಯವರನ್ನ ಆತ್ಮೀಯವಾಗಿ ಬರ ಮಾಡಿಕೊಂಡ ಯುಎಇ ಅಧ್ಯಕ್ಷ

Published : Jun 29, 2022, 10:21 AM IST
ಪ್ರಧಾನಿ ಮೋದಿಯವರನ್ನ ಆತ್ಮೀಯವಾಗಿ ಬರ ಮಾಡಿಕೊಂಡ ಯುಎಇ ಅಧ್ಯಕ್ಷ

ಸಾರಾಂಶ

ಜರ್ಮನಿ ಭೇಟಿಯಿಂದ ಹಿಂದಿರುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಸೀದಾ ಅರಬ್ ದೇಶ ಯುಎಇಗೆ ತೆರಳಿದ್ದು, ಯುಎಇ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಯವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. 

ಜರ್ಮನಿ ಭೇಟಿಯಿಂದ ಹಿಂದಿರುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಸೀದಾ ಅರಬ್ ದೇಶ ಯುಎಇಗೆ ತೆರಳಿದ್ದು, ಯುಎಇ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಯವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. ಯುಎಇ ಅಧ್ಯಕ್ಷ ಹಾಗೂ ಅಬುದಾಬಿಯ ಆಡಳಿತಗಾರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ವಿಮಾನ ನಿಲ್ದಾಣದಲ್ಲಿ ಅಪ್ಪುಗೆಯ ಮೂಲಕ ಪ್ರಧಾನಿಯನ್ನು ಸ್ವಾಗತಿಸಿದರು. ಆಗಸ್ಟ್ 2019ರ ಕೊನೆಯ ಭೇಟಿಯ ನಂತರ ಇಬ್ಬರು ಇದೇ ಮೊದಲ ಬಾರಿ ಪರಸ್ಪರ ಭೇಟಿಯಾಗಿದ್ದರು. 

ಈ ಬಗ್ಗೆ ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದು, ನನ್ನ ಸಹೋದರ ಶೇಕ್‌ ಮೊಹಮ್ಮದ್ ಬಿನ್‌ ಜಾಯೆದ್ ಅಲ್ ನಹ್ಯಾನ್‌ ಅವರ ವಿಶೇಷ ಆತ್ಮೀಯತೆ ನನ್ನ ಹೃದಯವನ್ನು ತಟ್ಟಿತು. ಅವರು ನನ್ನನ್ನು ಸ್ವಾಗತಿಸಲು ಅಬುಧಾಬಿ ಏರ್‌ಪೋರ್ಟ್‌ಗೆ ಬಂದಿದ್ದರು. ಅವರಿಗೆ ನನ್ನ ಕೃತಜ್ಞತೆಗಳು ಎಂದು ಪ್ರಧಾನಿ ಬರೆದುಕೊಂಡಿದ್ದಾರೆ. 

 

ಪ್ರಧಾನಿ ನರೇಂದ್ರ ಮೋದಿಯವರು (Prime Minister Narendra Modi) ಜೂನ್ 26 ಹಾಗೂ 27 ರಂದು ಜರ್ಮನಿಗೆ ಭೇಟಿ ನೀಡಿ ಅಲ್ಲಿ ಜಿ7 ಸಭೆಯಲ್ಲಿ ಭಾಗವಹಿಸಿ ನಂತರ ಸೀದಾ ಅಬುಧಾಬಿಗೆ ಬಂದಿದ್ದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ಇತ್ತೀಚೆಗೆ ನಿಧನರಾದ ಯುಎಇಯ ಮಾಜಿ ಅಧ್ಯಕ್ಷ ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ (Sheikh Khalifa bin Zayed Al Nahyan) ಅವರಿಗೆ ಶ್ರದ್ಧಾಂಜಲಿ ಸಮರ್ಪಿಸಿದರು. ಈ ವೇಳೆ ಪ್ರಧಾನಮಂತ್ರಿಯವರೊಂದಿಗೆ ಎನ್‌ಎಸ್‌ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಹಾಗೂ ಇತರರು ಇದ್ದರು.

ಪ್ರಧಾನಿ ಮೋದಿ ಮಾತನಾಡಿಸಲು ಓಡೋಡಿ ಬಂದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ವಿಡಿಯೋ ವೈರಲ್!

ಪ್ರವಾದಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯಿಂದಾಗಿ ಇತ್ತೀಚಿಗೆ ಸೃಷ್ಟಿಯಾದ  ವಿವಾದದ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಕಾಮೆಂಟ್‌ಗಳ ಬಗ್ಗೆ ಯುಎಇ ಕಳವಳ ವ್ಯಕ್ತಪಡಿಸಿತ್ತು. ಆದರೆ ಅದು ಭಾರತೀಯ ರಾಯಭಾರಿಗೆ ಈ ವಿಚಾರವಾಗಿ ಸಮನ್ಸ್‌ ನೀಡಿಲ್ಲ. ಆದರೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ವಕ್ತಾರರ ವಿರುದ್ಧದ ಕ್ರಮ ಕೈಗೊಂಡಿದ್ದನ್ನು ಸ್ವಾಗತಿಸಿತ್ತು. 


ಕಳೆದ ತಿಂಗಳು ನಿಧನರಾದ ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ವೈಯಕ್ತಿಕವಾಗಿ ಸಂತಾಪ ಸೂಚಿಸುವುದು ಈ ಭೇಟಿಯ ಉದ್ದೇಶವಾಗಿತ್ತು. ಅಲ್ ನಹ್ಯಾನ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಶೇಖ್ ತಹ್ನೂನ್ ಬಿನ್ ಜಾಯೆದ್ ಅಲ್ ನಹ್ಯಾನ್, ಉಪ ಪ್ರಧಾನಿ ಶೇಖ್ ಮನ್ಸೂರ್ ಬಿನ್ ಜಾಯೆದ್ ಅಲ್ ನಹ್ಯಾನ್, ಅಬುಧಾಬಿ ಇನ್ವೆಸ್ಟ್‌ಮೆಂಟ್  ಆಥಾರಿಟಿ ಎಂಡಿ ಶೇಖ್ ಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸೇರಿದಂತೆ ಕುಟುಂಬದ ಸದಸ್ಯರಿಗೆ ಮೋದಿ ಸಂತಾಪ ಸೂಚಿಸಿದರು.

G7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಜರ್ಮನಿ ಪ್ರಯಾಣ, ಅದ್ಧೂರಿ ಸ್ವಾಗತಕ್ಕೆ ವಿಶೇಷ ಕಾರ್ಯಕ್ರಮ!


ವಿದೇಶಾಂಗ ವ್ಯವಹಾರಗಳ ಮತ್ತು ಅಂತರಾಷ್ಟ್ರೀಯ ಸಹಕಾರ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಝಾಯೆದ್ ಅಲ್ ನಹ್ಯಾನ್ ಈ ವೇಳೆ ಉಪಸ್ಥಿತರಿದ್ದರು. ಯುಎಇಯ ಮೂರನೇ ಅಧ್ಯಕ್ಷರಾಗಿ ಆಯ್ಕೆಯಾದ ಮತ್ತು ಅಬುಧಾಬಿಯ ಆಡಳಿತಗಾರರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಮೋದಿ ಅಭಿನಂದಿಸಿದರು.

ಇಬ್ಬರೂ ನಾಯಕರು ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ವಿವಿಧ ಅಂಶಗಳನ್ನು ಪರಿಶೀಲಿಸಿದರು. ಫೆಬ್ರವರಿ 18 ರಂದು ತಮ್ಮ ವರ್ಚುವಲ್ (ಆನ್‌ಲೈನ್‌) ಶೃಂಗಸಭೆಯಲ್ಲಿ, ಎರಡೂ ದೇಶಗಳು ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ (CEPA) ಸಹಿ ಹಾಕಿದ್ದವು. ಇದು ಮೇ 1 ರಿಂದ ಜಾರಿಗೆ ಬಂದಿದೆ. CEPA ಎರಡೂ ದೇಶಗಳ ನಡುವೆ ವ್ಯಾಪಾರ ಮತ್ತು ಹೂಡಿಕೆಯನ್ನು ಇನ್ನಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. FY 2021-22 ರಲ್ಲಿ ದ್ವಿಪಕ್ಷೀಯ ವ್ಯಾಪಾರ ಸುಮಾರು $72 ಬಿಲಿಯನ್ ಆಗಿತ್ತು. ಯುಎಇ ಭಾರತದ ಮೂರನೇ ಅತಿದೊಡ್ಡ ವ್ಯಾಪಾರ ಪಾಲುದಾರ ಮತ್ತು ಎರಡನೇ ಅತಿದೊಡ್ಡ ರಫ್ತು ತಾಣವಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ