ಉಕ್ರೇನ್‌ ಯುದ್ಧ: ಆ.15ಕ್ಕೆ ಟ್ರಂಪ್‌-ಪುಟಿನ್‌ ಮಾತುಕತೆ

Kannadaprabha News   | Kannada Prabha
Published : Aug 10, 2025, 05:12 AM IST
Donald Trump

ಸಾರಾಂಶ

ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಆ.15ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡುವೆ ಅಲಸ್ಕಾದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ.

ವಾಷಿಂಗ್ಟನ್‌: ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಉದ್ದೇಶದಿಂದ ಆ.15ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ನಡುವೆ ಅಲಸ್ಕಾದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಈ ಮಾತುಕತೆ ವೇಳೆ ಭೂಭಾಗ ಮತ್ತು ಕೈದಿಗಳ ಹಸ್ತಾಂತರ ವಿಚಾರವೂ ಚರ್ಚೆಗೆ ಬರಲಿದೆ ಎಂದು ಹೇಳಲಾಗಿದೆ.

ಟ್ರಂಪ್‌ ಭೇಟಿಗಾಗಿ ಪುಟಿನ್‌ ಅ‍ವರು ದಶಕದ ಬಳಿಕ ಅಮೆರಿಕಕ್ಕೆ ತೆರಳುತ್ತಿದ್ದು, ಉಕ್ರೇನ್‌ ಹೊರಗಿಟ್ಟು ನಡೆಯುತ್ತಿರುವ ಈ ಶಾಂತಿ ಮಾತುಕತೆ ಇದೀಗ ವಿಶ್ವದ ಗಮನಸೆಳೆದಿದೆ. ಅಮೆರಿಕವು ತ್ರಿಪಕ್ಷೀಯ ಮಾತುಕತೆಯ ಪ್ರಸ್ತಾಪ ಮುಂದಿಟ್ಟಿತ್ತಾದರೂ ರಷ್ಯಾವು ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್‌ಸ್ಕಿ ಹೊರಗಿಟ್ಟರಷ್ಟೇ ಸಭೆಗೆ ಸಿದ್ಧ ಎಂದು ಸಂದೇಶ ರವಾನಿಸಿತ್ತು. ಈ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಮಾತುಕತೆಗೆ ವೇದಿಕೆ ಸಿದ್ಧಪಡಿಸಲಾಗಿದೆ.

ಟ್ರಂಪ್-ಪುಟಿನ್‌ ಮಾತುಕತೆಗೆ ಭಾರತ ಸ್ವಾಗತ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿ, ಶಾಂತಿ ಸ್ಥಾಪನೆ ಮಾಡುವ ಉದ್ದೇಶದಿಂದ ಮುಂದಿನ ವಾರ ಅಮೆರಿಕ ಅಧ್ಯಕ್ಷ ಟ್ರಂಪ್‌ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ನಡುವೆ ನಡೆಯಲಿರುವ ಮಾತುಕತೆಯನ್ನು ಭಾರತ ಸ್ವಾಗತಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ‘ಆ.15ರಂದು ಅಲಾಸ್ಕಾದಲ್ಲಿ ಅಮೆರಿಕ ಮತ್ತು ರಷ್ಯಾ ಒಕ್ಕೂಟದ ನಡುವೆ ನಡೆಯಲಿರುವ ಮಾತುಕತೆಯನ್ನು ಭಾರತ ಸ್ವಾಗತಿಸುತ್ತದೆ. ಈ ಚರ್ಚೆಯು, ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯ ಹಾಡಿ, ಶಾಂತಿ ಸ್ಥಾಪಿಸುವ ಭರವಸೆಯಿದೆ. ಪ್ರಧಾನಿ ಮೋದಿಯವರು ಹಲವಾರು ಬಾರಿ ಹೇಳಿದಂತೆ, ಇದು ಯುದ್ಧದ ಯುಗವಲ್ಲ. ಹಾಗಾಗಿ, ಭಾರತವು ಮುಂಬರುವ ಸಭೆಯನ್ನು ಅನುಮೋದಿಸುತ್ತದೆ ಮತ್ತು ಈ ಪ್ರಯತ್ನಗಳಿಗೆ ಬೆಂಬಲವಾಗಿ ನಿಲ್ಲುತ್ತದೆ’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!