ಉಕ್ರೇನ್‌ನ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ದಾಳಿ

By Kannadaprabha News  |  First Published Apr 25, 2022, 5:36 AM IST

* ಮರಿಯುಪೋಲ್‌ನಿಂದ ಉಕ್ರೇನ್‌ ಸೇನೆ ಹೊರಹಾಕಲು ಈ ದಾಳಿ

* ಉಕ್ರೇನ್‌ನ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ದಾಳಿ

* ಖೇರ್ಸನ್‌ನ ರಷ್ಯಾ ಸೇನಾ ನೆಲೆ ನಾಶ: ಉಕ್ರೇನ್‌


ಕೀವ್‌(ಏ.25): ರಷ್ಯಾ ಸೇನೆ ಬಹುತೇಕ ವಶಕ್ಕೆ ಪಡೆದುಕೊಂಡಿರುವ ಬಂದರು ನಗರ ಮರಿಯುಪೋಲ್‌ನಲ್ಲಿ ಉಳಿದಿರುವ ಉಕ್ರೇನ್‌ನ ಕೊನೆಯ ತುಕಡಿಯನ್ನು ಹೊರಹಾಕುವ ಉದ್ದೇಶದಿಂದ ಇಲ್ಲಿನ ಉಕ್ಕು ಕಾರ್ಖಾನೆಯ ಮೇಲೆ ರಷ್ಯಾ ಪಡೆಗಳು ವಾಯುದಾಳಿ ನಡೆಸಿವೆ.

ರಷ್ಯಾದ ಉಕ್ಕು ಕಾರ್ಖಾನೆಯಲ್ಲಿ ವಶಪಡಿಸಿಕೊಳ್ಳಲು ಸುಮಾರು 2000 ಯೋಧರು ಹೋರಾಟ ನಡೆಸುತ್ತಿದ್ದಾರೆ. ಅತಿ ದೂರಕ್ಕೆ ದಾಳಿ ಮಾಡಬಲ್ಲ ವಿಮಾನಗಳನ್ನುಬಳಸಿ ರಷ್ಯಾ ದಾಳಿ ನಡೆಸುತ್ತಿದೆ. ಮರಿಯುಪೋಲ್‌ನಲ್ಲಿ ಉಳಿದಿರುವ ಜನರಿಗೆ ಆಹಾರದ ಅಭಾವ ಎದುರಾಗಿದೆ. ಇದೇ ವೇಳೆ ರಾಜಧಾನಿ ಕೀವ್‌ನಿಂದ ತನ್ನ ಸೇನೆಯನ್ನು ಹಿಂಪಡೆಯುತ್ತಿರುವ ರಷ್ಯಾ ಉಳಿದ ನಗರ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ.

Tap to resize

Latest Videos

ಯುದ್ಧ ಆರಂಭವಾದಾಗಿನಿಂದಲೂ ಬಂದರು ನಗರ ಮಾರಿಯುಪೋಲ್‌ ಮೇಲೆ ರಷ್ಯಾ ಭೀಕರ ದಾಳಿ ನಡೆಸುತ್ತಲೇ ಇದೆ.

ರಷ್ಯಾ ಮಿಲಿಟರಿ ಕಮಾಂಡ್‌ ನಾಶ:

ಖೇರ್ಸನ್‌ನಲ್ಲಿ ನಿರ್ಮಿಸಲಾಗಿದ್ದ ರಷ್ಯಾದ ಸೇನಾ ಕಮಾಂಡ್‌ ನೆಲೆಯನ್ನು ನಾಶ ಮಾಡಿರುವುದಾಗಿ ಉಕ್ರೇನ್‌ ಸೇನೆ ಹೇಳಿದೆ. ಶುಕ್ರವಾರ ಈ ದಾಳಿ ನಡೆಸಲಾಗಿದ್ದು, ಇಬ್ಬರು ಸೇನಾ ಜನರಲ್‌ಗಳು ಹತರಾಗಿದ್ದಾರೆ. ಈ ಕಮಾಂಡ್‌ನಲ್ಲಿ 50ಕ್ಕೂ ಹೆಚ್ಚು ರಷ್ಯಾ ಸೇನೆಯ ಹಿರಿಯ ಅಧಿಕಾರಿಗಳಿದ್ದರು ಎಂದು ಉಕ್ರೇನ್‌ ಹೇಳಿದೆ.

ಉಕ್ರೇನ್‌ಗೆ ಅಮೆರಿಕ ವಿದೇಶಾಂಗ ಸಚಿವ ಬ್ಲಿಂಕನ್‌ ಶೀಘ್ರ ಭೇಟಿ

 ರಷ್ಯಾ-ಉಕ್ರೇನ್‌ ನಡುವೆ ಯುದ್ಧ ನಡೆಯುತ್ತಿರುವ ನಡುವೆಯೇ, ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌ ಮತ್ತು ರಕ್ಷಣಾ ಕಾರ‍್ಯದರ್ಶಿ ಲಾಯ್ಡ್‌ ಆಸ್ಟಿನ್‌ ಅವರು ಶೀಘ್ರದಲ್ಲೇ ಉಕ್ರೇನಿಗೆ ಭೇಟಿ ನೀಡಲಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ತಿಳಿಸಿದ್ದಾರೆ. ಆದರೆ ಅಮೆರಿಕ ಅಧ್ಯಕ್ಷರ ನಿವಾಸ ಶ್ವೇತಭವನ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ರಷ್ಯಾ-ಉಕ್ರೇನ್‌ ನಡುವೆ ಕಳೆದ 60 ದಿನಗಳಿಂದ ಭೀಕರ ಯುದ್ಧ ನಡೆಯುತ್ತಿದ್ದು ಸಾವಿರಾರು ಮಂದಿ ರಷ್ಯಾದ ಕ್ರೌರ‍್ಯಕ್ಕೆ ಬಲಿಯಾಗಿದ್ದಾರೆ.

click me!