
ಕಾಬೂಲ್(ಆ.29): ಅರಾಜಕತೆ ಸೃಷ್ಟಿಯಾಗಿರುವ ಅಷ್ಘಾನಿಸ್ತಾನವನ್ನು ಆ.31ರ ಒಳಗಾಗಿ ಅಮೆರಿಕ ಸೈನ್ಯವು ತೊರೆಯಲಿದೆ. ಈ ಹಿನ್ನೆಲೆಯಲ್ಲಿ ಅಷ್ಘಾನಿಸ್ತಾನ ರಾಜಧಾನಿ ಕಾಬೂಲ್‌ನಲ್ಲಿದ್ದ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆ(ಸಿಐಎ)ಯ ನೆಲೆಯನ್ನು ಅಮೆರಿಕ ಪಡೆಗಳು ಧ್ವಂಸ ಮಾಡಿವೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಅಮೆರಿಕ ಮತ್ತು ಅಷ್ಘಾನಿಸ್ತಾನಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳು ಮತ್ತು ಅಮೆರಿಕದ ಯುದ್ಧೋಪಕರಣ ಮತ್ತು ಶಸ್ತ್ರಾಸ್ತ್ರಗಳು ತಾಲಿಬಾನಿಗಳ ಕೈ ವಶವಾಗಬಾರದು ಎಂಬ ಕಾರಣಕ್ಕಾಗಿ ಕಾಬೂಲ್ ಹೊರವಲಯದಲ್ಲಿದ್ದ ಗುಪ್ತಚರದ ಈ ನೆಲೆಯನ್ನು ಧ್ವಂಸ ಮಾಡಲಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ಅಮೆರಿಕದ ಸಿಐಎ ನಿರಾಕರಿಸಿದೆ.
ಅಮೆರಿಕದ ಈಗಲ್ ನೆಲೆ ಎಂಬ ಇದೇ ನೆಲೆಯಲ್ಲಿ ಅಷ್ಘಾನಿಸ್ತಾನದ ಭಯೋತ್ಪಾದಕ ನಿಗ್ರಹ ಪಡೆಗಳು ಮತ್ತು ಗುಪ್ತಚರ ಏಜೆನ್ಸಿಗಳಿಗೆ ತರಬೇತಿ ನೀಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ