ನನ್ನ ಗೆಳೆಯ ಡೋನಾಲ್ಡ್ ಟ್ರಂಪ್‌ಗೆ ಅಭಿನಂದನೆ, ಶುಭಾಶಯದಲ್ಲೂ ಸಂದೇಶ ರವಾನಿಸಿದ ಮೋದಿ!

By Chethan Kumar  |  First Published Nov 6, 2024, 2:41 PM IST

ಜಿದ್ದಾಜಿದ್ದಿನ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಕಮಲಾ ಹ್ಯಾರಿಸ್ ವಿರುದ್ದ ಗೆದ್ದ ಟ್ರಂಪ್ ನೂತನ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಟ್ರಂಪ್ ಗೆಲುವಿನ ನಗೆ ಬೀರುತ್ತಿದ್ದಂತೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.  


ನವದೆಹಲಿ(ನ.6) ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಕಮಲಾ ಹ್ಯಾರಿಸ್ ಹಾಗೂ ಟ್ರಂಪ್ ನಡುವೆ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ವಿರುದ್ದ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರವಹಿಸಿಕೊಳ್ಳಲಿದ್ದಾರೆ. ಡೋನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ರಂಪ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಮೋದಿ, ಭಾರತ ಹಾಗೂ ಅಮೆರಿಕ ದ್ವಿಪಕ್ಷೀಯ ಸಂಬಂಧ, ವ್ಯಾಪಾರ ವಹಿವಾಟು ಮತ್ತಷ್ಟು ಉತ್ತಮಪಡಿಸಲು ಜಂಟಿಯಾಗಿ ಹೆಜ್ಜೆ ಹಾಕೋಣ ಎಂದಿದ್ದಾರೆ.

ಟ್ವೀಟ್ ಮೂಲಕ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರಿಗೆ ಐತಿಹಾಸಿಕ ಚುನಾವಣಾ ಗೆಲುವಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸನ್ನು ಮುಂದುವರೆಸುತ್ತಿದ್ದೀರಿ. ಭಾರತ-ಅಮೆರಿಕ ವ್ಯಾಪಕ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು,  ನಮ್ಮ ಸಹಯೋಗವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡೋಣ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸೋಣ ಎಂದು ಮೋದಿ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.   

Tap to resize

Latest Videos

undefined

 

Heartiest congratulations my friend on your historic election victory. As you build on the successes of your previous term, I look forward to renewing our collaboration to further strengthen the India-US Comprehensive Global and Strategic Partnership. Together,… pic.twitter.com/u5hKPeJ3SY

— Narendra Modi (@narendramodi)

 

ಅಮೆರಿಕಾ ಅಧ್ಯಕ್ಷ ಚುನಾವಣೆ: ಗೆಲುವಿನ ನಗೆ ಬೀರಿದ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಹೇಗೆ ನಡೆಯುತ್ತದೆ?
ಅಮೆರಿಕದಲ್ಲಿ ಅಧ್ಯಕ್ಷರ ಚುನಾವಣೆ ಸಂಕೀರ್ಣ ಪ್ರಕ್ರಿಯೆಯ ಮೂಲಕ ನಡೆಯುತ್ತದೆ. ಸಾಮಾನ್ಯ ಜನರು ನೇರವಾಗಿ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುವುದಿಲ್ಲ. ಬದಲಾಗಿ ಅವರು ಚುನಾವಣಾ ಮಂಡಳಿಯ ಸದಸ್ಯರನ್ನು ಆಯ್ಕೆ ಮಾಡುತ್ತಾರೆ. ಚುನಾವಣಾ ಮಂಡಳಿಯ ಸದಸ್ಯರು ನಂತರ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಾರೆ.

ಅಮೆರಿಕದಲ್ಲಿ ಒಟ್ಟು 538 ಚುನಾವಣಾ ಮತಗಳಿವೆ. ಇವು 50 ರಾಜ್ಯಗಳು ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ವಿಂಗಡಿಸಲ್ಪಟ್ಟಿವೆ. ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಚುನಾವಣಾ ಮತಗಳ ಸಂಖ್ಯೆ ಹೆಚ್ಚು. 270 ಅಥವಾ ಅದಕ್ಕಿಂತ ಹೆಚ್ಚು ಚುನಾವಣಾ ಮತಗಳನ್ನು ಪಡೆಯುವ ಅಭ್ಯರ್ಥಿಗೆ ಅಧ್ಯಕ್ಷರಾಗುವ ಅವಕಾಶ ಸಿಗುತ್ತದೆ. ಬುಧವಾರ ಮಧ್ಯಾಹ್ನದ ವೇಳೆಗೆ ಬಂದ ಫಲಿತಾಂಶಗಳ ಪ್ರಕಾರ ಟ್ರಂಪ್ 266 ಚುನಾವಣಾ ಮತಗಳನ್ನು ಗೆದ್ದಿದ್ದಾರೆ. ಅವರಿಗೆ ಕನಿಷ್ಠ 4 ಮತಗಳು ಬೇಕು. ಅವರ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ 205 ಚುನಾವಣಾ ಮತಗಳನ್ನು ಗೆದ್ದಿದ್ದಾರೆ. ಇಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ದಿನಕ್ಕೆ 100 ಎಕರೆಯಷ್ಟು ಫಿಜ್ಜಾ ತಿನ್ನುವ ಜನ: ಅಮೆರಿಕದ 10 ಕುತೂಹಲಕಾರಿ ವಿಚಾರ

click me!