
ಪೆನ್ಸಿಲ್ವೇನಿಯಾ (ಆ.27) : ಕೊರೋನಾ ಸೋಂಕಿತರು ಕೆಲವೊಮ್ಮೆ ಎಲ್ಲೆಂದರಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆಗಳನ್ನು ನೋಡಿದ್ದೇವೆ.
ಆದರೆ, ಅಮೆರಿಕದ ಪೆನ್ಸಿಲ್ವೇನಿಯಾ ರಾಜ್ಯದ ಸೂಪರ್ ಮಾರ್ಕೆಟ್‌ವೊಂದಕ್ಕೆ ತೆರಳಿದ ಕೊರೋನಾ ಸೋಂಕಿತೆಯೊಬ್ಬಳು 25 ಲಕ್ಷ ರು. ಮೊತ್ತದ ಆಹಾರ ಪದಾರ್ಥಗಳು, ಹಣ್ಣು- ತರಕಾರಿಗಳ ಮುಂದೆ ನಿಂತು ಕೆಮ್ಮಿ, ಎಂಜಲನ್ನು ಉಗುಳಿದ್ದಾಳೆ.
ಏರ್‌ಪೋರ್ಟ್‌ನಲ್ಲಿ ಕೋವಿಡ್ ಟೆಸ್ಟ್ ಮಾಡಿಸಿ ಮನೆಗೆ ಹೋಗ್ಬಹುದು: ಸರ್ಕಾರ
ಅಲ್ಲದೇ ಮಾರ್ಗರೇಟ್ ಆನ್ ಸಿರ್ಕೊ ತನಗೆ ಕೊರೋನಾ ಸೋಂಕು ತಗಲಿದೆ ಎಂದು ಹೇಳಿ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದಾಳೆ.
ಕೂಡಲೇ ಆಕೆಯನ್ನು ಬಂಧಿಸಿ ಪರೀಕ್ಷೆಗೆ ಒಳಪಡಿಸಿದ ವೇಳೆ ಕೊರೋನಾ ವರದಿ ನೆಗೆಟಿವ್ ಬಂದಿದ್ದು ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.
ಆದರೆ, ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದಕ್ಕೆ ಕೋರ್ಟ್ ಆಕೆಗೆ 2 ವರ್ಷಗಳ ಜೈಲು ಶಿಕ್ಷೆ ಹಾಗೂ 22 ಲಕ್ಷ ರು. ದಂಡ ವಿಧಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ