Instagram's AI Solution: ಮಕ್ಕಳ ವಯಸ್ಸು ಪತ್ತೆಗೆ AI ಬಳಸಲು ಇನ್‌ಸ್ಟಾ ನಿರ್ಧಾರ: ನಕಲಿ ವಯಸ್ಸು ದಾಖಲಾದ ಖಾತೆಗಳು ಪತ್ತೆ

Published : Apr 22, 2025, 09:15 AM ISTUpdated : Apr 22, 2025, 02:24 PM IST
Instagram's AI Solution: ಮಕ್ಕಳ ವಯಸ್ಸು ಪತ್ತೆಗೆ AI ಬಳಸಲು ಇನ್‌ಸ್ಟಾ ನಿರ್ಧಾರ: ನಕಲಿ ವಯಸ್ಸು ದಾಖಲಾದ ಖಾತೆಗಳು ಪತ್ತೆ

ಸಾರಾಂಶ

ಇನ್‌ಸ್ಟಾಗ್ರಾಮ್ ನಕಲಿ ವಯಸ್ಸು ಬಳಸುವ ಹದಿಹರೆಯದವರನ್ನು ಪತ್ತೆಹಚ್ಚಲು AI ತಂತ್ರಜ್ಞಾನ ಅಳವಡಿಸುತ್ತಿದೆ. ಸುಳ್ಳು ಜನ್ಮದಿನಾಂಕ ನೀಡುವ ಖಾತೆಗಳನ್ನು ಗುರುತಿಸಿ, ಟೀನ್ ಖಾತೆಗಳಿಗೆ ನಿರ್ಬಂಧ ವಿಧಿಸಲಾಗುವುದು. ಖಾಸಗಿ ಖಾತೆಯಾಗಿ ಪರಿವರ್ತಿಸಿ, ಸಂದೇಶಗಳನ್ನು ನಿಯಂತ್ರಿಸಲಾಗುವುದು. ಅತಿಯಾದ ಬಳಕೆಗೆ ಎಚ್ಚರಿಕೆ ನೀಡಿ, ರಾತ್ರಿ ಸಮಯದಲ್ಲಿ ಸ್ಲೀಪ್ ಮೋಡ್‌ಗೆ ಬದಲಾಯಿಸಲಾಗುವುದು.

ಮಕ್ಕಳ ವಯಸ್ಸು ಪತ್ತೆಗೆ AI ಬಳಸಲು ಇನ್‌ಸ್ಟಾ ನಿರ್ಧಾರ: ನಕಲಿ ವಯಸ್ಸು ದಾಖಲಾದ ಖಾತೆಗಳು ಪತ್ತೆ

ವಾಷಿಂಗ್ಟನ್‌: 13 ವರ್ಷಕ್ಕಿಂತ ಕಿರಿಯರ ಬಳಕೆಗೆ ಅನುಮತಿಸದ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಇದೀಗ ಹದಿಹರೆಯದವರು ನಕಲಿ ವಯಸ್ಸು ದಾಖಲಿಸಿ ವಯಸ್ಕರ ಖಾತೆಯನ್ನು ಹೊಂದುವುದನ್ನು ಪತ್ತೆ ಮಾಡಲು ಕೃತಕ ಬುದ್ಧಿಮತ್ತೆಯನ್ನು ಬಳಸಲು ಸಿದ್ಧತೆ ನಡೆಸಿದೆ.

ಅಪ್ರಾಪ್ತ ಬಳೆಕೆದಾರರು ಉದ್ದೇಶಪೂರ್ವಕವಾಗಿ ತಮ್ಮ ಸುಳ್ಳು ಜನ್ಮದಿನಾಂಕವನ್ನು ದಾಖಲಿಸಿ ‘ವಯಸ್ಕ’ ಎಂದು ಬಿಂಬಿಸಿಕೊಂಡದ್ದು ಕಂಡುಬಂದಲ್ಲಿ, ಅದನ್ನು ಎಐ ಮೂಲಕ ಪತ್ತೆ ಮಾಡಲಾಗುವುದು ಎಂದು ಇನ್ಸ್‌ಟಾಗ್ರಾಂನ ಮಾತೃಸಂಸ್ಥೆ ಮೆಟಾ ತಿಳಿಸಿದೆ. ಆದರೆ ಇದನ್ನು ಯಾವ ಆಧಾರದಲ್ಲಿ ಪತ್ತೆ ಮಾಡಲಾಗುವುದು ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ಟೀನ್‌ ಖಾತೆ ಮೇಲಿನ ನಿರ್ಬಂಧಗಳು 
ಖಾತೆಯು ಹದಿಹರೆಯದವರಿಗೆ ಸೇರಿದ್ದು ಎಂದು ಕಂಡುಬಂದಲ್ಲಿ, ಅದನ್ನು ಸ್ವಯಂಚಾಲಿತವಾಗಿ ‘ಖಾಸಗಿ’ ಖಾತೆಯನ್ನಾಗಿ ಪರಿವರ್ತಿಸಲಾಗುವುದು. ಅಂತೆಯೇ, ಪರಸ್ಪರ ಹಿಂಬಾಲಿಸುವವರು ಮಾತ್ರ ಸಂದೇಶ ಕಳಿಸಲು ಅನುಮತಿಸಲಾಗುವುದು. ಕ್ರೌರ್ಯ, ಸೌಂದರ್ಯವರ್ಧಕಗಳಿಗೆ ಸಂಬಂಧಿಸಿದ ವಿಷಯಗಳು ಆ ಖಾತೆಯನ್ನು ತಲುಪದಂತೆ ತಡೆಹಿಡಿಯಲಾಗುತ್ತದೆ. ದಿನದಲ್ಲಿ 60 ನಿಮಿಷಗಳಿಗಿಂತ ಅಧಿಕ ಕಾಲ ಟೀನ್‌ ಖಾತೆಗಳು ಸಕ್ರಿಯವಾಗಿದ್ದಲ್ಲಿ, ನೋಟಿಫಿಕೇಷನ್‌ಗಳ ಮೂಲಕ ಎಚ್ಚರಿಸಲಾಗುವುದು. ಅಂತೆಯೇ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 7ರ ವರೆಗೆ ಸ್ಲೀಪ್‌ ಮೋಡ್‌ನಲ್ಲಿರಲಿದ್ದು, ಈ ವೇಳೆ ಸಂದೇಶಗಳಿಗೆ ಸ್ವಯಂಚಾಲಿತ ಪ್ರತಿಕ್ರಿಯೆಗಳನ್ನು ರವಾನಿಸಲಾಗುತ್ತದೆ.

ಪೋಸ್ಟ್ ಲೈಕ್‌ ಮಾಡಿದರೆ ಅಪರಾಧವಲ್ಲ: ಹೈಕೋರ್ಟ್‌
ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ಪೋಸ್ಟ್‌ಗೆ ಲೈಕ್ (ಮೆಚ್ಚುಗೆ) ಕೊಟ್ಟಲ್ಲಿ, ಅದು ಆ ಪೋಸ್ಟ್ ಅನ್ನು ಪ್ರಕಟಿಸಿದಂತೆ ಆಗುವುದಿಲ್ಲ ಹಾಗೂ ಅಶ್ಲೀಲ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್‌ 67ರ ಅಡಿ ನೀಡಲಾಗುವ ಶಿಕ್ಷೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಫೇಸ್ಬುಕ್ ಪೋಸ್ಟ್‌ ಒಂದಕ್ಕೆ ಲೈಕ್ ನೀಡಿದ ಕಾರಣ ಇಮ್ರಾನ್ ಖಾನ್ ಎಂಬಾತ ಆರೋಪಿಯಾಗಿರುವ ಪ್ರಕರಣದ ವಿಚಾರಣೆ ವೇಳೆ ನ್ಯಾ. ಸೌರಭ್ ಶ್ರೀವಾತ್ಸವ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾ ಘಟನೆ ಬೆನ್ನಲ್ಲೇ, ಪಾಕ್‌ ಹಿಂದೂ ಸಚಿವ ಖೇಲ್‌ದಾಸ್‌ ಕೊಹಿಸ್ತಾನಿ ಮೇಲೆಯೂ ಹಲ್ಲೆ!

ಆಗ್ರಾ ಜಿಲ್ಲಾಧಿಕಾರಿಗಳ ಕಚೇರಿಯೆದುರು ನಡೆಯಲಿದ್ದ ಪ್ರತಿಭಟನಾ ಸಭೆಯನ್ನು ಪ್ರಸ್ತಾವಿಸಿ ಚೌಧುರಿ ಫರ್ಹಾನ್ ಉಸ್ಮಾನ್ ಎಂಬಾತ ಫೇಸ್‌ಬುಕ್‌ನಲ್ಲಿ ಮಾಡಿದ್ದ ಪೋಸ್ಟ್‌ಗೆ ಇಮ್ರಾನ್ ಖಾನ್ ಲೈಕ್ ಒತ್ತಿದ್ದ. ಪ್ರಚೋದನಕಾರಿಯಾಗಿದ್ದ ಆ ಪೋಸ್ಟ್ 600-700 ಮುಸ್ಲಿಮರು ಜಮಾವಣೆಯಾಗಿ, ಅನುಮತಿ ಪಡೆಯದೆ ಮೆರವಣಿಗೆ ನಡೆಸಲು ಕಾರಣವಾಯಿತು ಎಂದು ಇಮ್ರಾನ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲದೆ, ಗಲಭೆ ಹಾಗೂ ಕಾನೂನುಬಾಹಿರ ಜಮಾವಣೆಗೆ ಸಂಬಂಧಿಸಿದ ಭಾರತೀಯ ದಂಡಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ‘ಪ್ರಶ್ನಾರ್ಹವಾದ ಪೋಸ್ಟ್‌ಗೆ ಇಮ್ರಾನ್ ಲೈಕ್ ಮಾತ್ರ ಕೊಟ್ಟಿದ್ದಾರೆ. ಆದ್ದರಿಂದ ಅದು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿ ಅಪರಾಧವೆಂಬುದಾಗಿ ಪರಿಗಣಿಸಲ್ಪಡುವುದಿಲ್ಲ’ ಎಂದಿದದೆ.

ಇದನ್ನೂ ಓದಿ: ಎಲೋನ್‌ ಮಸ್ಕ್‌ ತಾಯಿ ಜೊತೆ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಜಾಕ್ವೆಲಿನ್‌ ಫೆರ್ನಾಂಡಿಜ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ