
ವೆನಿಸ್[ಜ.14]: ನೀರಿನ ಮೇಲೆ ತೇಲುವ ನಗರಿ ಎಂಬ ಹೆಗ್ಗಳಿಕೆ ಹೊಂದಿರುವ ಇಟಲಿಯ ವೆನಿಸ್ ನಗರವೀಗ ಸಮುದ್ರದ ಉಬ್ಬರ ಹಾಗೂ ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿದೆ. ಕಳೆದ 50 ವರ್ಷಗಳಲ್ಲೇ ಮೊದಲ ಬಾರಿ ನೀರಿನ ಮಟ್ಟಅತಿ ಹೆಚ್ಚು ಪ್ರಮಾಣದಲ್ಲಿ ಏರಿಕೆ ಕಂಡಿದೆ. ಪ್ರವಾಹ ಸಂಬಂಧಿತ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ವೆನಿಸ್‌ನ ಬಹುತೇಕ ಭಾಗ ಸಮುದ್ರ ಮಟ್ಟದಿಂದ 1.1 ಮೀಟರ್‌ನಿಂದ 1.4 ಮೀಟರ್‌ನಷ್ಟುಎತ್ತರದಲ್ಲಿದೆ. ಆದರೆ, ಪ್ರವಾಹದ ನೀರು ಈಗಾಗಲೇ 1.87 ಮೀಟರ್ ಎತ್ತರ ತಲುಪಿದ್ದು, ನಗರದ ಶೇ.87ರಷ್ಟುಭಾಗ ಜಲಾವೃತಗೊಂಡಿದೆ. ಭಾರೀ ಮಳೆಯಿಂದಾಗಿ 1.60 ಮೀಟರ್ ಎತ್ತರದ ಸಮುದ್ರದ ಅಲೆಗಳು ಏಳುವ ಸಾಧ್ಯತೆ ಇದ್ದು, ವೆನಿಸ್ ಇನ್ನಷ್ಟುಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ.
ಇದೇ ವೇಳೆ ವೆನಿಸ್‌ನಲ್ಲಿ ಪ್ರವಾಹದ ನೀರಿನ ಮಟ್ಟಏರಿಕೆಗೆ ಹವಾಮಾನ ಬದಲಾವಣೆಯೇ ಕಾರಣ ಎಂದು ನಗರದ ಮೇಯರ್ ಮೇಯರ್ ಲುಯಿಗಿ ಬ್ರೂಗ್ನಾರೊ ಆರೋಪಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ