
ದುಬೈ (ಫೆ.26): ದುಬೈನಲ್ಲಿ ಒಕ್ಕಲಿಗರ ವಿಹಾರ ಕೂಟ ನಡೆಯಿತು. ಭಾನುವಾರ ನಡೆದ ಕಾರ್ಯಕ್ರಮದಲ್ಲಿ 'ಒಕ್ಕಲಿಗ ಕುಟುಂಬಗಳ ಸಮಾಗಮ' ಆಯ್ತು. ದುಬೈ ಒಕ್ಕಲಿಗ ಸಂಘದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಸಂಘದ ಅಧ್ಯಕ್ಷರಾದ ಕಿರಣ್ ಗೌಡ ರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 300ಕ್ಕಿಂತ ಹೆಚ್ಚು ಒಕ್ಕಲಿಗ ಸಮುದಾಯದವರು ಸೇರಿದ್ದರು. ಇದೇ ಸಂದರ್ಭದಲ್ಲಿ ಹೊಸದಾಗಿ ಆಯ್ಕೆಯಾದ ಸಮಿತಿಯ ಸದ್ಯಸರುಗಳಿಗೆ ಅಭಿನಂದನೆ ಸಲ್ಲಿಸಲಾಯ್ತು.
ಇದೇ ವೇಳೆ ಗೌಡರ ಶೈಲಿಯ ಊಟೋಪಚಾರಗಳೊಂದಿಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಕಣ್ಮನ ಸೆಳೆದವು. ಮಹಿಳೆಯರು ಮಕ್ಕಳು ಸೇರಿದಂತೆ ನೂರಾರು ಮಂದಿ ಒಂದೆಡೆ ಸೇರಿ ವಿವಿಧ ಆಟೋಟ ಸ್ಪರ್ಧೆಗಳಲ್ಲೂ ಪಾಲ್ಗೊಂಡಿದ್ದರು. ಮಕ್ಕಳು ಮತ್ತು ಹಿರಿಯರಿಗೆ ವಿಶೇಷ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ