ಭಾರತ-ಪಾಕ್‌ ಕದನ ವಿರಾಮಕ್ಕೆ ನನ್ನ ಮಧ್ಯಸ್ಥಿಕೆ: 8ನೇ ಬಾರಿ ಹೇಳಿದ ಟ್ರಂಪ್‌

Published : May 23, 2025, 04:34 AM IST
ಭಾರತ-ಪಾಕ್‌ ಕದನ ವಿರಾಮಕ್ಕೆ ನನ್ನ ಮಧ್ಯಸ್ಥಿಕೆ: 8ನೇ ಬಾರಿ ಹೇಳಿದ ಟ್ರಂಪ್‌

ಸಾರಾಂಶ

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ 8ನೇ ಬಾರಿ ಹೇಳಿದ್ದಾರೆ.   

ವಾಷಿಂಗ್ಟನ್‌ (ಮೇ.23): ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ 8ನೇ ಬಾರಿ ಹೇಳಿದ್ದಾರೆ. ಇತ್ತೀಚೆಗೆ ಇದಕ್ಕೆ ಶ್ವೇತಭವನ ಸ್ಪಷ್ಟನೆ ನೀಡಿ, ‘ಅದು ಮಧ್ಯಸ್ಥಿಕೆ ಅಲ್ಲ, ಸಹಾಯ ಮಾತ್ರ’ ಎಂದಿದ್ದರೂ ಟ್ರಂಪ್‌ ತಮ್ಮ ಹಳೆಯ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಂಫೋಸಾ ಜತೆಗಿನ ಭೇಟಿ ವೇಳೆ ಬುಧವಾರ ರಾತ್ರಿ ಮಾತನಾಡಿದ ಟ್ರಂಪ್‌, ‘ಭಾರತ-ಪಾಕ್‌ ನಡುವೆ ಗುಂಡಿನ ದಾಳಿ ಇನ್ನಷ್ಟು ಕೆಟ್ಟದಾಗುತ್ತಾ, ದೊಡ್ಡದಾಗುತ್ತಾ, ಆಳವಾಗುತ್ತಾ ಹೋಗುತ್ತಿತ್ತು. ಯಾರಾದರೂ ಕೊನೆಗೆ ಗುಂಡು ಹಾರಿಸಬೇಕಿತ್ತು. ಆ ವೇಳೆ ಭಾರತ-ಪಾಕಿಸ್ತಾನ ನಡುವಿನ ಕದನವನ್ನು ನಾವು ವ್ಯಾಪಾರದ ಮೂಲಕ (ವ್ಯಾಪಾರ ನಡೆಸುವ ಷರತ್ತಿನ ಮೂಲಕ) ಇತ್ಯರ್ಥಪಡಿಸಿಕೊಂಡಿದ್ದೇನೆ. ಭಾರತ-ಪಾಕ್‌ ಜತೆ ನಮ್ಮ ದೊಡ್ಡ ವ್ಯಾಪಾರ ನಡೆಯುತ್ತದೆ’ ಎಂದರು.

‘ಪಾಕಿಸ್ತಾನವು ಕೆಲವು ಅತ್ಯುತ್ತಮ ಜನರನ್ನು ಮತ್ತು ಒಳ್ಳೆಯ, ಶ್ರೇಷ್ಠ ನಾಯಕರನ್ನು ಹೊಂದಿದೆ ಮತ್ತು ಭಾರತ ನನ್ನ ಸ್ನೇಹಿತ ಮೋದಿಯನ್ನು ಹೊಂದಿದೆ. ಅವರು ಒಳ್ಳೆಯ ವ್ಯಕ್ತಿಗಳು ಮತ್ತು ನಾನು ಅವರಿಬ್ಬರ ಜತೆಗೂ ಮಾತನಾಡಿದೆ’ ಎಂದರು. ಆಗ ದಕ್ಷಿಣ ಆಫ್ರಿಕಾದ ಅಧ್ಯಕ್ಷರು ’ನಾನೂ ಮೋದಿಯ ಒಳ್ಳೇ ಸ್ನೇಹಿತ’ ಎಂದರು.

ನನ್ನಲ್ಲಿ ಈಗ ಸಿಂದೂರ ಹರಿಯುತ್ತಿದೆ, ಇದು ಭಾರತದ ಹೊಸ ರೂಪ: ಪ್ರಧಾನಿ ಮೋದಿ

ಮೌನವೇಕೆ?- ಮೋದಿಗೆ ಕಾಂಗ್ರೆಸ್‌ ಪ್ರಶ್ನೆ: ‘ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಸಂಘರ್ಷವನ್ನು ವ್ಯಾಪಾರದ ಭರವಸೆಯ ಮೂಲಕ ಬಗೆಹರಿಸಿದ್ದೇನೆ ಎಂದು ಟ್ರಂಪ್ 8ನೇ ಬಾರಿ ಹೇಳಿದ್ದಾರೆ. ಆದರೂ ಮೋದಿ ಏಕೆ ಮೌನ ವಹಿಸಿದ್ದಾರೆ?’ ಎಂದು ಕಾಂಗ್ರೆಸ್ ವಕ್ತಾರರಾದ ಜೈರಾಂ ರಮೇಶ್‌ ಹಾಗೂ ಪವನ್‌ ಖೇರಾ ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್