ನಿನ್ನೆ ನಾವು ಡ್ರೋನ್‌, ಕ್ಷಿಪಣಿ ದಾಳಿ ನಡೆಸಿಯೇ ಇಲ್ಲ: ಪಾಕ್‌ ವಿದೇಶಾಂಗ ಸಚಿವಾಲಯ ಹೇಳಿಕೆ

Published : May 10, 2025, 04:24 AM IST
ನಿನ್ನೆ ನಾವು ಡ್ರೋನ್‌, ಕ್ಷಿಪಣಿ ದಾಳಿ ನಡೆಸಿಯೇ ಇಲ್ಲ: ಪಾಕ್‌ ವಿದೇಶಾಂಗ ಸಚಿವಾಲಯ ಹೇಳಿಕೆ

ಸಾರಾಂಶ

ಭಾರತದ ಹಲವು ನಗರಗಳ ಮೇಲೆ ಭಾರೀ ಡ್ರೋನ್‌, ಕ್ಷಿಪಣಿ ದಾಳಿ ನಡೆಸಿದ್ದ ಪಾಕಿಸ್ತಾನ, ಇದೀಗ ಅಂಥ ದಾಳಿ ನಡೆದೇ ಇಲ್ಲ ಎಂದು ಕಥೆಕಟ್ಟುತ್ತಿದೆ.

ಇಸ್ಲಾಮಾಬಾದ್‌ (ಮೇ.10): ಭಾರತದ ಹಲವು ನಗರಗಳ ಮೇಲೆ ಭಾರೀ ಡ್ರೋನ್‌, ಕ್ಷಿಪಣಿ ದಾಳಿ ನಡೆಸಿದ್ದ ಪಾಕಿಸ್ತಾನ, ಇದೀಗ ಅಂಥ ದಾಳಿ ನಡೆದೇ ಇಲ್ಲ ಎಂದು ಕಥೆಕಟ್ಟುತ್ತಿದೆ. ‘ಭಾರತೀಯ ಮಾಧ್ಯಮಗಳ ಇಂಥ ಆರೋಪ ಆಧಾರರಹಿತವಾಗಿದ್ದು, ಇದು ಅಪಪ್ರಚಾರ ಆಂದೋಲನದ ಭಾಗ’ ಎಂದು ಅವಲತ್ತುಕೊಂಡಿದೆ. ಜತೆಗೆ, ಇಂಥ ಅಪಪ್ರಚಾರವು ಪ್ರಾದೇಶಿಕ ಶಾಂತಿಗೆ ಅಡ್ಡಿಯುಂಟು ಮಾಡಲಿದೆ ಎಂದೂ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಗುರುವಾರ ತಡರಾತ್ರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಆಕ್ಷೇಪ ಎತ್ತಿದೆ.

ಜಮ್ಮು, ಪಠಾಣ್‌ಕೋಟ್‌, ಉಧಂಪುರ ಸೇರಿ ಭಾರತದ ಹಲವು ಪ್ರದೇಶಗಳ ಮೇಲೆ ಪಾಕಿಸ್ತಾನ ಬುಧವಾರ ರಾತ್ರಿ ಮತ್ತು ಗುರುವಾರ ರಾತ್ರಿ ಭಾರೀ ಡ್ರೋನ್‌, ಕ್ಷಿಪಣಿ ದಾಳಿ ನಡೆಸಿದೆ ಎಂದು ಭಾರತೀಯ ಸೇನೆ ಹೇಳಿಕೊಂಡಿತ್ತು. ‘ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ. ಆದರೆ, ಪಾಕಿಸ್ತಾನ ಹಾರಿಬಿಟ್ಟ ಎಲ್ಲ ಡ್ರೋನ್‌, ಕ್ಷಿಪಣಿಗಳನ್ನು ಭಾರತ ಹೊಡೆದುರುಳಿಸಿದೆ’ ಎಂದು ಸೇನೆ ಹೇಳಿಕೊಂಡಿತ್ತು.

ಆದರೆ, ಪಾಕಿಸ್ತಾನದ ವಿದೇಶಾಂಗ ಸಚಿವ ಮಾತ್ರ ಈ ಆರೋಪವನ್ನು ತಿರಸ್ಕರಿಸಿದೆ. ‘ನಾವು ಆ ರೀತಿ ದಾಳಿ ನಡೆಸಿಯೇ ಇಲ್ಲ. ಭಾರತವು ಯಾವುದೇ ಪಾಕಿಸ್ತಾನದ ವಿರುದ್ಧ ಪದೇ ಪದೇ ಆರೋಪ ಮಾಡುತ್ತಿದೆ. ಇದು ಭಾರತದ ಆಕ್ರಮಶೀಲತೆಯ ಭಾಗವಾಗಿದೆ. ಈ ಮೂಲಕ ಅಸ್ಥಿರತೆ ಸೃಷ್ಟಿಗೆ ನೆರೆಯ ದೇಶ ಯತ್ನಿಸುತ್ತಿದೆ’ ಎಂದು ದೂರಿದೆ.

ಯುದ್ಧ ಬೇಡ, ಶಾಂತಿ ಬೇಕು: ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸಲಹೆ

‘ಈ ರೀತಿಯ ಆತಂಕಕಾರಿ ವರ್ತನೆಯನ್ನು ಅಂತಾರಾಷ್ಟ್ರೀಯ ಸಮುದಾಯಗಳು ಗಂಭೀರವಾಗಿ ಪರಿಗಣಿಸಬೇಕು, ಸಂಯಮ ಮತ್ತು ಜಾವಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಬುದ್ಧಿ ಹೇಳಬೇಕು. ಪಾಕಿಸ್ತಾನದ ಸಾರ್ವಭೌಮತ್ವ ಮತ್ತು ಭೌಗೋಳಿಕ ಸಮಗ್ರತೆಯನ್ನು ಕಾಯ್ದುಕೊಳ್ಳಲು ಇಂಥ ಸುಳ್ಳಿನ ಬೆದರಿಕೆಗೆ ನಾವು ಸೂಕ್ತ ಪ್ರತ್ಯುತ್ತರ ನೀಡಲಿದ್ದೇವೆ. ಪಾಕಿಸ್ತಾನವು ಶಾಂತಿಗೆ ಬದ್ಧವಾಗಿದೆ. ಆದರೆ ಯಾವುದೇ ಪ್ರಚೋದನೆ, ಬೆದರಿಕೆಗೆ ತಕ್ಕ ಪ್ರತ್ಯುತ್ತರ ನೀಡುವ ಹಕ್ಕನ್ನು ಕಾಯ್ದಿರಿಸಿಕೊಂಡಿದೆ’ ಎಂದು ಹೇಳಿಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಶ್ವದ ಅತಿ ಬಲಿಷ್ಠ ಕರೆನ್ಸಿಗಳಿವು: ಭಾರತದ ರುಪಾಯಿ ಮುಂದೆ ಘರ್ಜಿಸುವ ಡಾಲರ್ ಈ ದೇಶದ ಕರೆನ್ಸಿ ಮುಂದೆ ಡಮ್ಮಿ!
ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಹೊಸ ಹೆಜ್ಜೆ, ನಟ ಮಹೇಶ್ ಬಾಬುಗೆ ಪ್ಯಾನ್ ವರ್ಲ್ಡ್ ಪಟ್ಟ..!