ಭಾರತದ ಚುನಾವಣೆ ಕುರಿತು ತಪ್ಪು ಮಾಹಿತಿ ನೀಡಿದ ಜುಕರ್‌ಬರ್ಗ್‌

Published : Jan 15, 2025, 07:54 AM IST
ಭಾರತದ ಚುನಾವಣೆ ಕುರಿತು ತಪ್ಪು ಮಾಹಿತಿ ನೀಡಿದ ಜುಕರ್‌ಬರ್ಗ್‌

ಸಾರಾಂಶ

ಕೋವಿಡ್‌ ನಿರ್ವಹಣೆಯ ವೈಫಲ್ಯದಿಂದಾಗಿ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಆಡಳಿತಾರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡವು ಎಂಬ ಜುಕರ್‌ಬರ್ಗ್‌ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಕೇಂದ್ರ ಸರ್ಕಾರದ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದು, ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾಗೆ ನೋಟಿಸ್‌ ನೀಡಲು ಸಂಸದೀಯ ಸಮಿತಿ ನಿರ್ಧರಿಸಿದೆ.

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ನಿರ್ವಹಣೆಯಲ್ಲಿನ ವೈಫಲ್ಯವು, ಕೋವಿಡ್‌ ನಂತರದ ಅವಧಿಯಲ್ಲಿ ಭಾರತ ಸೇರಿದಂತೆ ವಿಶ್ವದ ಬಹುತೇಕ ದೇಶಗಳಲ್ಲಿನ ಆಡಳಿತಾರೂಢ ಸರ್ಕಾರಗಳನ್ನು ಅಧಿಕಾರದಿಂದ ಕಿತ್ತೊಗೆಯಲು ಕಾರಣವಾಯ್ತು ಎಂಬ ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಹೇಳಿಕೆ ವಾಸ್ತವಕ್ಕೆ ವಿರುದ್ಧವಾದುದು ಎಂದು ಕೇಂದ್ರ ಸರ್ಕಾರದ ಹಲವು ಸಚಿವರು ಜುಕರ್‌ಬರ್ಗ್ ಕಿಡಿಕಾರಿದ್ದಾರೆ. ಮತ್ತೊಂದೆಡೆ ಹೇಳಿಕೆ ಸಂಬಂಧ ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾಗೆ ನೋಟಿಸ್‌ ನೀಡಲು ಮಾಹಿತಿ ತಂತ್ರಜ್ಞಾನ ಕುರಿತ ಸಂಸದೀಯ ಸಮಿತಿ ನಿರ್ಧರಿಸಿದೆ.

ಏನಿದು ವಿವಾದ?: ಇತ್ತೀಚೆಗೆ ಪೋಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿದ್ದ ಜುಕರ್‌ಬರ್ಗ್‌, ಕೋವಿಡ್‌ ನಿರ್ವಹಣೆ ವಿಷಯದಲ್ಲಿ ವಿಶ್ವದ ಬಹುತೇಕ ದೇಶಗಳು ತಮ್ಮ ನಾಗರಿಕರ ವಿಶ್ವಾಸ ಕಳೆದುಕೊಂಡವು. ಸಾಂಕ್ರಾಮಿಕ ಕುರಿತ ಸರ್ಕಾರದ ನೀತಿಗಳು ಮತ್ತು ಪರಿಸ್ಥಿತಿ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದು ಇದಕ್ಕೆ ಕಾರಣವಾಯ್ತು. ಇದರ ಪರಿಣಾಮ, ನಂತರದ ವರ್ಷಗಳಲ್ಲಿ ನಡೆದ ಚುನಾವಣೆಗಳಲ್ಲಿ ಭಾರತ ಸೇರಿದಂತೆ ಬಹುತೇಕ ದೇಶಗಳಲ್ಲಿ ಆಡಳಿತಾರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡವು ಎಂದು ಹೇಳಿದ್ದರು.

ಇದನ್ನೂ ಓದಿ: 400 ಬಾಂಬ್‌ ಕರೆ ಮಾಡಿದ ಬಾಲಕನಿಗೆ ಉಗ್ರ ಅಫ್ಜಲ್‌ ನಂಟು?

ಆದರೆ ಕೋವಿಡ್‌ ನಂತರದಲ್ಲಿ 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜಪಿ ಗೆಲುವು ಸಾಧಿಸಿತ್ತು. ಹೀಗಾಗಿ ಜುಕರ್‌ಬರ್ಗ್‌ ಹೇಳಿಕೆ ಕುರಿತು ಹಲವು ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ಮತ್ತು ಮಾಹಿತಿ ತಂತ್ರಜ್ಞಾನ ಕುರಿತ ಸಂಸದೀಯ ಸಮಿತಿಯ ಮುಖ್ಯಸ್ಥ ನಿಶಿಕಾಂತ್‌ ದುಬೆ, ಪ್ರಜಾಪ್ರಭುತ್ವ ದೇಶವೊಂದರ ಕುರಿತ ತಪ್ಪು ಮಾಹಿತಿ ದೇಶದ ಘನತೆಗೆ ಧಕ್ಕೆ ತರುತ್ತದೆ. ಈ ಕುರಿತು ಮೆಟಾ ಕ್ಷಮೆ ಹೇಳಬೇಕು. ಭಾರತದ ಚುನಾವಣೆ ಕುರಿತಂತೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾಗೆ ನೋಟಿಸ್‌ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: 2ನೇ ಜಾಗತಿಕ ಯುದ್ಧದ ವೇಳೆ ಸೈನಿಕರು ಬಚ್ಚಿಟ್ಟ ನಿಧಿ ಪೆಟ್ಟಿಗೆ ಪತ್ತೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವಧಿಯಲ್ಲಿ ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ : ಸಲ್ಮಾನ್‌ ರಶ್ದಿ ಆರೋಪ
ಆಸೀಸ್‌ನಲ್ಲಿ ಮಕ್ಕಳಿಗೆ ಜಾಲತಾಣ ಬಳಕೆ ನಿಷೇಧ : ನಾಳೆಯಿಂದ ಜಾರಿ