ಇಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ
ಮಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಸೆ.10ರಂದು ನಗರದ ಡಾ.ಟಿ.ಎಂ.ಎ. ಪೈ ಇಂಟರ್ ನ್ಯಾಷನಲ್ ಕನ್‌ವೆನ್‌ಶನ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು (ಸೆ.10): ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಸೆ.10ರಂದು ನಗರದ ಡಾ.ಟಿ.ಎಂ.ಎ. ಪೈ ಇಂಟರ್ ನ್ಯಾಷನಲ್ ಕನ್‌ವೆನ್‌ಶನ್ ಸೆಂಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ನಾರಾಯಣಗುರು ಪಠ್ಯ ಮರುಸೇರ್ಪಡೆ ಹೋರಾಟಕ್ಕೆ ಸಂದ ಜಯ; ಬಿಲ್ಲವ ನಾಯಕರ ಸ್ಪಷ್ಟನೆ
ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್(V.Sunil Kumar) ಕ್ರೀಡಾಕೂಟ ಉದ್ಘಾಟಿಸುವರು. ಶಾಸಕ ಡಿ.ವೇದವ್ಯಾಸ್ ಕಾಮತ್(MLA Vedavyas Kamath) ಅಧ್ಯಕ್ಷತೆ ವಹಿಸುವರು. ಸಚಿವರಾದ ಎಸ್. ಅಂಗಾರ(S.K.Angara), ಕೋಟ ಶ್ರೀನಿವಾಸ ಪೂಜಾರಿ(Kota Shrinivas Poojari), ಸಂಸದ ನಳಿನ್ ಕುಮಾರ್ ಕಟೀಲ್(Nalin Kumar Kateel), ರಾಜ್ಯಸಭೆಯ ಸಂಸದ ಡಾ.ಡಿ. ವೀರೇಂದ್ರ ಹೆಗ್ಗಡೆ(Dr.Veerendranath Hegde), ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ.ವೈ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್, ರಾಜೇಶ್ ನಾೖಕ್, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ ಭಾಗವಹಿಸಲಿದ್ದಾರೆ.
ಕುದ್ರೋಳಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಬಿ. ಅವರು ನಾರಾಯಣ ಗುರುಗಳ ಜಯಂತಿ ಸಂದೇಶ ನೀಡುವರು. ಅಂದು ಸಂಜೆ 4 ಗಂಟೆಗೆ ನಗರದ ನಾರಾಯಣಗುರು ವೃತ್ತದಿಂದ ಡಾ.ಟಿ.ಎಂ.ಎ. ಪೈ ಇಂಟರ್ ನ್ಯಾಷನಲ್ ಕನ್‌ವೆನ್‌ಶನ್ ಸೆಂಟರ್‌ವರೆಗೆ ನಾರಾಯಣ ಗುರುಗಳ ಸ್ತಬ್ಧಚಿತ್ರದೊಂದಿಗೆ ಚೆಂಡೆ, ಗೊಂಬೆ, ಸ್ಯಾಕ್ಸೋಫೋನ್, ಡೊಳ್ಳು ಕುಣಿತ, ಹುಲಿವೇಷ ಮುಂತಾದ ಜನಪದ ಕಲಾ ತಂಡದೊಂದಿಗೆ ಮೆರವಣಿಗೆ ನಡೆಯಲಿದೆ. ವಿದ್ವಾನ್ ಪ್ರಮೋದ್ ಉಳ್ಳಾಲ್ ನೃತ್ಯ ಸಂಯೋಜನೆ ಮತ್ತು ಡಾ.ಅರುಣ್ ಉಳ್ಳಾಲ್ ಸಾಹಿತ್ಯದೊಂದಿಗೆ ಬ್ರಹ್ಮಶ್ರೀ ನಾರಾಯಣಗುರು ಭರತನಾಟ್ಯ ನೃತ್ಯರೂಪಕ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಯುವ ಚಿತ್ರ ಕಲಾವಿದರಿಂದ ಗುರುಗಳ ಸಂದೇಶ ಸಾರುವ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ.
ನಾರಾಯಣಗುರುಗಳ ಸಂದೇಶ ಪರಿವರ್ತನೆಗೆ ಹಾದಿ: ಗಿರೀಶ್ ನಂದನ್
ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಸಮಾಜ ಪರಿವರ್ತನೆಗೆ ಹಾದಿಯಾಗಿದ್ದು, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಭವಿಷ್ಯದ ಪೀಳಿಗೆಗೆ ತಲುಪಿಸುವ ಕೆಲಸವಾಗಬೇಕು ಎಂದು ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್ ಹೇಳಿದರು. ಅವರು ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಜಯಂತಿ ದಿನಾಚರಣೆಯಲ್ಲಿ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಿ ಮಾತನಾಡಿದರು.
ನಾರಾಯಣ ಗುರು ಪಾಠ ಮತ್ತೆ ಸಮಾಜ ವಿಜ್ಞಾನಕ್ಕೇ ಸೇರ್ಪಡೆ: ನಾಗೇಶ್ ಸೂಚನೆ
ಪುತ್ತೂರು ಬಿಲ್ಲವ ಸಂಘ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಮಾತನಾಡಿದರು. ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ್, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಸೀಲ್ದಾರ್ ನಿಸರ್ಗಪ್ರಿಯ, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ನಗರಸಭಾ ಪೌರಾಯುಕ್ತ ಮಧು ಎಸ್. ಮನೋಹರ್ ಉಪಸ್ಥಿತರಿದ್ದರು. ಕಂದಾಯ ಇಲಾಖೆಯ ದಯಾನಂದ ಡಿ.ಟಿ. ಸ್ವಾಗತಿಸಿದರು. ಉಪತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮ ನಿರ್ವಹಿಸಿದರು.