Karnataka News Live 1st April 2025 : ನಿತ್ಯಾನಂದನ ನಿಧನ ಸುದ್ದಿ ಅಲ್ಲಗೆಳೆದ ಕೈಲಾಸ, ಸ್ಪಷ್ಟನೆ ಬೆನ್ನಲ್ಲೇ ಹೆಚ್ಚಿದ ಅನುಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2ರಂದು ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಲು ಅನುವಾಗುತ್ತಿದ್ದಂತೆಯೇ ಕಾಂಗ್ರೆಸ್ನಲ್ಲಿ ವಿಧಾನಪರಿಷತ್ ಸ್ಥಾನಾಕಾಂಕ್ಷಿಗಳ ಲಾಬಿ ಮೇರೆ ಮೀರಿದೆ. ಲಭ್ಯವಿರುವ ನಾಲ್ಕು ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದಾರೆ. ವಿವಿಧ ಕ್ಷೇತ್ರದ ಸಾಧಕರನ್ನು ವಿಧಾನಪರಿಷತ್ತಿಗೆ ನಾಮಕರಣ ಮಾಡಲು ನಾಲ್ಕು ಸ್ಥಾನ ಲಭ್ಯವಿದೆ. ಸಿ.ಪಿ.ಯೋಗಶ್ವರ್ (ಒಕ್ಕಲಿಗ), ಪ್ರಕಾಶ್ ರಾಠೋಡ್ (ಎಸ್ಸಿ), ಕೆ.ಎಂ.ತಿಪ್ಪೇಸ್ವಾಮಿ (ಹಿಂದುಳಿದ) ಹಾಗೂ ಯು.ಬಿ. ವೆಂಕಟೇಶ್ (ಬ್ರಾಹ್ಮಣ) ಅವರ ಅವಧಿ ಪೂರ್ಣಗೊಂಡ ಕಾರಣಕ್ಕೆ ತೆರವಾಗಿರುವ ಸ್ಥಾನಗಳಿವು. ಕಾಂಗ್ರೆಸ್ ನಾಯಕತ್ವ ಈ ಸ್ನಾನಗಳನ್ನು ಬಹುತೇಕ ಯಾವ ಸಮುದಾಯದಿಂದ ತೆರವಾಗಿದೆಯೋ ಅದೇ ಸಮುದಾಯಕ್ಕೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಇದರಿಂದಾಗಿ ಒಕ್ಕಲಿಗ, ಎಸ್ಸಿ (ಬಲಗೈ), ಹಿಂದುಳಿದ ವರ್ಗ ಹಾಗೂ ಬ್ರಾಹ್ಮಣಸಮುದಾಯಕ್ಕೆ ಈ ಸ್ಥಾನ ಲಭ್ಯವಾಗಬೇಕು. ಆದರೆ, ಬ್ರಾಹ್ಮಣ ಸಮುದಾಯದ ಬದಲಾಗಿ ಅಲ್ಪಸಂಖ್ಯಾತ ಸಮುದಾಯ ವಿಶೇಷವಾಗಿ, ಕ್ರಿಶ್ಚಿಯನ್ ಸಮುದಾಯಕ್ಕೆ ಆ ಸ್ಥಾನ ನೀಡಬಹುದೇ ಎಂಬ ಚಿಂತನೆಯೂ ಇದೆ ಎನ್ನಲಾಗಿದೆ.