Karnataka News Live: ಭಾರತದ ಈ ಗ್ರಾಮದ ಜನರಿಗೆ ಹೆಸ್ರೇ ಇಲ್ಲ! ಹಾಡು, ಶಿಳ್ಳೆಗಳಿಂದಲೇ ಸಂವಹನ... ವಿಚಿತ್ರ ಊರಿನ ವಿಡಿಯೋ ನೋಡಿ...
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟಗೊಳ್ಳಲಿದೆ. ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ (https://karresults.nic.in) ತಮ್ಮ ಫಲಿತಾಂಶ ವೀಕ್ಷಿಸಬಹುದು. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಗುವ ನಿರೀಕ್ಷೆಯಿದ್ದು, ಇನ್ನೊಂದು ವಾರದೊಪ್ಪತ್ತಿನಲ್ಲಿ ಚುನಾವಣಾ ಉಸ್ತುವಾರಿಯಾಗಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಕ್ಕೆ ಆಗಮಿಸುವ ಬಗ್ಗೆ ಗುಸು ಗುಸು ಕೇಳಿಬರುತ್ತಿದೆ.