Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪ್ರತಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್, ರೋಟರಿ ಎಕ್ಸಲೆನ್ಸ್ ಅವಾರ್ಡ್ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಮತ್ತು ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ನಿರ್ವಹಣೆ.