Karnataka News Live: ಎಂ.ಎಸ್.ಧೋನಿ ದಿನಕ್ಕೆ 5 ಲೀಟರ್ ಕುಡಿತಾರಾ? ಇಲ್ಲಿದೆ ಧೋನಿ ಸ್ಪಷ್ಟನೆ
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಕ್ರಮ ಆಗಲಿದೆ’ ಎಂದು ಭರವಸೆ ನೀಡಿದರು. ಕಳೆದ ವಾರ ರಾಜ್ಯದ ಹಲವು ನಗರಗಳ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ, ತೆಗೆದು ಕತ್ತರಿಸಿದ ಘಟನೆ ನಡೆದಿತ್ತು. ಘಟನೆ ಬಗ್ಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ವಿಷಯ ಗೊತ್ತಾಗುತ್ತಿದ್ದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರು ಭಾನುವಾರ ಮಧ್ಯಾಹ್ನ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ, ಧೈರ್ಯ ತುಂಬಿದರು