Karnataka News Live: ಸಿದ್ದರಾಮಯ್ಯ ಬಗ್ಗೆ ಸತ್ಯ ಹೇಳಿದರೆ ಹೊಗಳಿಕೆ ಹೇಗಾಗುತ್ತೆ?: ಗೃಹ ಸಚಿವ ಪರಮೇಶ್ವರ್ ಸಮರ್ಥನೆ
ಬೆಂಗಳೂರು: ಜಾತಿಜನಗಣತಿಯ ಮೂಲ ವರದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಪಾದಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗಿರುವುದು ನಕಲಿ ವರದಿ ಎಂದು ಹೇಳಿದರು. ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಬಾವಿಯಲ್ಲಿರುವ ಕಸದಂತೆ ಆಗಿದೆ ಎಂದಿದ್ದಾರೆ. ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವಂತಿಲ್ಲ. ಹಿರಿಯರು ಮಾಡಿರುವ ಆಚರಣೆಗಳಿಗೆ ಅಡ್ಡಿ ಮಾಡಿದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸರ್ಕಾರ ಬದ್ಧವಿದೆ. ಆಚರಣೆಗಳನ್ನು ಅನುಸರಿಸಲು ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಮುಕ್ತ ಅವಕಾಶ ನೀಡುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಏ.16 ಮತ್ತು 17ರಂದು ನಡೆದ ಸಿಇಟಿ ಪರೀಕ್ಷೆ ವೇಳೆ ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದ ರೀತಿಯಲ್ಲಿಯೇ ಧಾರವಾಡದಲ್ಲೂ ವಿದ್ಯಾರ್ಥಿಯೊಬ್ಬನ ಜನಿವಾರ ಕತ್ತರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಇಂದು ನಡೆಯುವ ರಾಜಕೀಯ ಮತ್ತು ರಾಜಕೀಯೇತರ ಸುದ್ದಿಗಳ ಕುರಿತ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.