ನವದೆಹಲಿ(ಫೆ.19): ಮಾಲಿನ್ಯ ನಿಯಂತ್ರಣ ಹಾಗೂ ಇಂಧನ ಉಪಯೋಗವನ್ನ ಕಡಿಮೆ ಮಾಡಲು ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಈಗಾಗಲೇ ಎಲೆಕ್ಟ್ರಿಕ್ ಕಾರು ಖರೀದಿಸೋ ಗ್ರಾಹಕರಿಗೆ ಕೇಂದ್ರ ಸರ್ಕಾರ 50,000 ರೂಪಾಯಿ ನೀಡಲು ಮುಂದಾಗಿದ್ದು, ಇದರ ಬೆನ್ನಲ್ಲೇ ಮತ್ತೊಂದು ಘೋಷಣೆ ಮಾಡಿದೆ. 

ಇದನ್ನೂ ಓದಿ: ಬಜಾಜ್ ಪಲ್ಸರ್ NS200 ಕಳ್ಳತನ- 1 ಗಂಟೆಯಲ್ಲಿ ಸಿಕ್ಕಿ ಬಿದ್ದ ಕಳ್ಳರು!

ದೇಶದ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಇತರ ರಸ್ತೆಗಳಲ್ಲಿ ಪ್ರತಿ 25 ಕಿ.ಮೀಗೆ ಎಲೆಕ್ಟ್ರಿಕ್ ಕಾರು ಚಾರ್ಜಿಂಗ್ ಸ್ಟೇಶನ್ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಎಲೆಕ್ಟ್ರಿಕ್ ಕಾರು ಗ್ರಾಹಕರಿಗೆ ಚಾರ್ಜಿಂಗ್ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೊಳಿಸಲಿದೆ.

ಇದನ್ನೂ ಓದಿ: ನೆಲಕ್ಕೆ ಬಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ಸುಲಭವಾಗಿ ಎತ್ತಲು ಇಲ್ಲಿದೆ ಟಿಪ್ಸ್!

ಈ ಯೋಜನೆಯ ಮೊದಲ ಅಂಗವಾಗಿ ನಗರ ಪ್ರದೇಶಗಳಲ್ಲಿ ಈಗಾಗಲೇ ಚಾರ್ಜಿಂಗ್ ಸ್ಟೇಶನ್ ಅಳವಡಿಸಲು ಯೋಜನೆ ಸಿದ್ದಗೊಂಡಿದೆ. ನವದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಈಗಾಗಲೇ ಚಾರ್ಜಿಂಗ್ ಸ್ಟೇಶನ್ ಅಳವಡಿಕೆ ಕಾರ್ಯ ಆರಂಭಗೊಂಡಿದೆ.