ಎಲೆಕ್ಟ್ರಿಕ್‌ ವಾಹನಗಳಿಗೆ 500 ಚಾರ್ಜಿಂಗ್‌ ಕೇಂದ್ರ: ಸುನೀಲ್‌

  • ವಿದ್ಯುತ್‌ ಚಾಲಿತ ವಾಹನಗಳ ಬಳಕೆ ಪ್ರೋತ್ಸಾಹಿಸಲು ಮುಂದಿನ ದಿನಗಳಲ್ಲಿ ಕ್ರಮ
  •  ರಾಜ್ಯಾದ್ಯಂತ 500ಕ್ಕೂ ಹೆಚ್ಚು ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸುವ ಗುರಿ
Electric recharge centres to be opened across Karnataka says minister sunil kumar snr

 ಬೆಂಗಳೂರು (ಸೆ.10):  ವಿದ್ಯುತ್‌ ಚಾಲಿತ ವಾಹನಗಳ ಬಳಕೆ ಪ್ರೋತ್ಸಾಹಿಸಲು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ 500ಕ್ಕೂ ಹೆಚ್ಚು ಚಾರ್ಜಿಂಗ್‌ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದ್ದು, ಬೆಂಗಳೂರು ನಗರದಲ್ಲೇ 136 ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

‘ವಿಶ್ವ ವಿದ್ಯುತ್‌ ಚಾಲಿತ ವಾಹನಗಳ ದಿನಾಚರಣೆ’ ಅಂಗವಾಗಿ ಗುರುವಾರ ಕಂಠೀರವ ಕ್ರೀಡಾಂಗಣದ ಬಳಿ ಹಮ್ಮಿಕೊಂಡಿದ್ದ ವಿದ್ಯುತ್‌ ಚಾಲಿತ ವಾಹನಗಳ ಜಾಥಾದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಭಾರತದಲ್ಲಿ ಹೊಂಡಾ CB200X ಬೈಕ್ ಡೆಲಿವರಿ ಆರಂಭ!

ವಿದ್ಯುತ್‌ ಚಾಲಿತ ವಾಹನಗಳು ಭವಿಷ್ಯದಲ್ಲಿ ಅನಿವಾರ್ಯವಾಗುವ ಕಾರಣದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇವುಗಳ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ. ಯುವಕರು ಇಂತಹ ವಾಹನಗಳನ್ನು ಹೆಚ್ಚಾಗಿ ಬಳಸಬೇಕು ಎಂದರು.

‘ಪರಿಸರ ಸ್ನೇಹಿ ವಾಹನ ಬಳಸಿ’ ಫಲಕ ಬಿಡುಗಡೆಗೊಳಿಸಿದ ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ವಿದ್ಯುತ್‌ ಚಾಲಿತ ವಾಹನಗಳಿಗೆ ಸಬ್ಸಿಡಿ ನೀಡುತ್ತದೆ. ಇದರಿಂದ ಪರಿಸರ ಮಾಲಿನ್ಯವನ್ನೂ ತಡೆಯಬಹುದು. ಈ ನಿಟ್ಟಿನಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಬಳಕೆ ಹೆಚ್ಚಾಗಬೇಕು ಎಂದು ಹೇಳಿದರು.

ತೋಟಗಾರಿಕೆ ಸಚಿವ ಮುನಿರತ್ನ ಮಾತನಾಡಿ, ಹೊಸದಾಗಿ ಸ್ಥಾಪಿಸುವ ಚಾರ್ಜಿಂಗ್‌ ಪಾಯಿಂಟ್‌ಗಳನ್ನು ಪೆಟ್ರೋಲ್‌ ಬಂಕ್‌ಗಳ ಸಮೀಪವೇ ಮಾಡಬೇಕು. ವಿದ್ಯುತ್‌ ಚಾಲಿತ ವಾಹನಗಳ ದರ ಪೆಟ್ರೋಲ್‌ ಬಳಕೆಯ ವಾಹನಗಳಿಗಿಂತ ಕಡಿಮೆ ಇರಬೇಕು ಎಂದು ಹೇಳಿದರು.

ಕರ್ನಾಟಕ ಒಲಿಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಕೆ.ಗೋವಿಂದರಾಜ್‌ ಮತ್ತಿತರರು ಹಾಜರಿದ್ದರು.

ವಿಶ್ವ ವಿದ್ಯುತ್‌ ಚಾಲಿತ ವಾಹನಗಳ ದಿನಾಚರಣೆ ಅಂಗವಾಗಿ ಗುರುವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದ ಬಳಿ ಹಮ್ಮಿಕೊಂಡಿದ್ದ ವಿದ್ಯುತ್‌ ಚಾಲಿತ ವಾಹನಗಳ ಜಾಥಾದಲ್ಲಿ ಸಚಿವರಾದ ವಿ.ಸುನಿಲ್‌ ಕುಮಾರ್‌, ಕೆ.ಸಿ.ನಾರಾಯಣಗೌಡ, ಮುನಿರತ್ನ, ಕರ್ನಾಟಕ ಒಲಿಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಕೆ.ಗೋವಿಂದರಾಜ್‌ ಮತ್ತಿತರರು ಪಾಲ್ಗೊಂಡಿದ್ದರು.

Latest Videos
Follow Us:
Download App:
  • android
  • ios