ಮಹಾರಾಷ್ಟ್ರ(ಮೇ.01): ಮಾಲಿನ್ಯ ನಿಯಂತ್ರಣ ಹಾಗೂ ಇಂಧನ ಬಳಕೆ ಗಣನೀಯವಾಗಿ ತಗ್ಗಿಸಲು ಕೇಂದ್ರ ಸರ್ಕಾರ ಎಲೆಕ್ಟ್ರಿಕ್ ವಾಹನಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಇದಕ್ಕಾಗಿ FAME ಯೋಜನೆ ಕೂಡ ಜಾರಿಗೆ ತಂದಿದೆ. ಇದೀಗ ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಬರೋಬ್ಬರಿ 1 ಲಕ್ಷ ರೂಪಾಯಿ ಸಬ್ಸಡಿ ನೀಡಲು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಇದನ್ನೂ ಓದಿ: ಗುಡ್ ಬೈ ಹೇಳಿದ ಮಹೀಂದ್ರ e2o ಎಲೆಕ್ಟ್ರಿಕ್ ಕಾರು !

ಎಲೆಕ್ಟ್ರಿಕ್ ಸ್ಕೂಟರ್ ಅಥವಾ ಬೈಕ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ 5,000 ರೂಪಾಯಿ, ಎಲೆಕ್ಟ್ರಿಕ್ ಆಟೋ ರಿಕ್ಷಾ ಖರೀದಿಸುವ ಗ್ರಾಹಕರಿಗೆ 12,000 ರೂಪಾಯಿ ಹಾಗೂ ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಗರಿಷ್ಠ 1 ಲಕ್ಷ ರೂಪಾಯಿ ಸಬ್ಸಡಿ ನೀಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಎಲೆಕ್ಟ್ರಿಕ್ ಕಾರು ಬಳಕೆ ಹೆಚ್ಚಿಸಲು ಮಹತ್ವದ ಹೆಜ್ಜೆ ಇಟ್ಟಿದೆ.

ಇದನ್ನೂ ಓದಿ: ಮಾರುತಿ ಸುಜುಕಿ ಎರ್ಟಿಗಾ 1.5 L ಡೀಸೆಲ್ ಕಾರು ಬಿಡುಗಡೆ!

ಕೇಂದ್ರ ಸರ್ಕಾರ ಕೂಡ ಈಗಾಗಲೇ ಎಲೆಕ್ಟ್ರಿಕ್ ಕಾರು ಬಳಕೆಗೆ ಸಬ್ಸಡಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಕೂಡ ಎಲೆಕ್ಟ್ರಿಕ್ ಕಾರು ಖರೀದಿಗೆ ಉತ್ತೇಜನೆ ನೀಡುತ್ತಿದೆ. ಇತ್ತ ಎಲೆಕ್ಟ್ರಿಕ್ ವಾಹನದ ಚಾರ್ಜಿಂಗ್ ಸ್ಟೇಶನ್ ಅಳವಡಿಸಲು ಈಗಾಗಲೇ ಮಹಾರಾಷ್ಟ್ರ ಸರ್ಕಾರ ತಯಾರಿ ನಡೆಸಿದೆ. ಸರ್ಕಾರದ ಈ ನಿರ್ಧಾರದಿಂದ ಮಹಾರಾಷ್ಟ್ರದಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆ ಹೆಚ್ಚಾಗಲಿದೆ.   ಮಾಲಿನ್ಯ ಕಡಿಮೆಯಾಗಲಿದೆ.