ಸಣ್ಣ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಮುಂದಾದ ಹೊಂಡಾ!

ಹೊಂಡಾ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲು ರೆಡಿಯಾಗಿದೆ. ಆರಂಭಿಕ ಹಂತದಲ್ಲಿ ಸಣ್ಣ ಎಲೆಕ್ಟ್ರಿಕ್ ಕಾರು ಬಿಡುದಡೆ ಮಾಡಲು ತಯಾರಿ ಮಾಡಿಕೊಂಡಿದೆ. ಹ್ಯಾಚ್‌ಬ್ಯಾಕ್ ರೂಪದಲ್ಲಿ ನೂತನ ಹೊಂಡಾ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗುತ್ತಿದೆ. ಟೆಸ್ಲಾ ತಂತ್ಪಜ್ಞಾನ ಹಾಗೂ ಗರಿಷ್ಠ ಮೈಲೇಜ್ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ಮುಂದಿನ ತಿಂಗಳು ನೂತನ ಹೊಂಡಾ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗುತ್ತಿದೆ.

Honda set to launch small size electric car in Europe

ಜಪಾನ್(ಆ.27): ಹೊಂಡಾ ಇದೀಗ ಎಲೆಕ್ಟ್ರಿಕ್ ವಿಭಾಗಕ್ಕೆ ಎಂಟ್ರಿಕೊಡುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ವಿಭಾಗದಲ್ಲಿ ಅತ್ಯುತ್ತಮ ಕಾರುಗಳನ್ನು ಬಿಡುಗಡೆ ಮಾಡಿ ಗ್ರಾಹಕರ ಮನ ಗೆದ್ದಿರುವ ಹೊಂಡಾ ಇದೀಗ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡುತ್ತಿದೆ.  ನೂತನ ಕಾರು ಅತ್ಯುತ್ತಮ ಮೈಲೇಜ್ ರೇಂಜ್, ಅತ್ಯಾಧುನಿಕ ತಂತ್ರಜ್ಞಾನ ಸೇರಿದಂತೆ ಕೆಲ ವಿಶೇಷ ಫೀಚರ್ಸ್ ಒಳಗೊಂಡಿದೆ. 

Honda set to launch small size electric car in Europe

ಮೇಡ್ ಇನ್ ಇಂಡಿಯಾ ಹೈಬ್ರಿಡ್ ಕಾರು ಬಿಡುಗಡೆಗೆ ಮಾಡಲಿದೆ ಹೊಂಡಾ!.

ಹೊಂಡಾ ಆರಂಭಿಕ ಹಂತದಲ್ಲಿ ಸಣ್ಣ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡುತ್ತಿದೆ. ಹ್ಯಾಚ್‌ಬ್ಯಾಕ್ ಎಲೆಕ್ಟ್ರಿಕ್ ಕಾರು ಒಂದು ಬಾರಿ ಚಾರ್ಜ್ ಮಾಡಿದರೆ 280 ಕಿ.ಮೀ ಮೈಲೇಜ್ ನೀಡಲಿದೆ. 1960ರಲ್ಲಿ ಹೊಂಡಾ N360 ಹಾಗೂ N600 ಕಾರಿ ಮಾಡೆಲ್ ಸ್ಪೂರ್ತಿ ಪಡೆದು ಎಲೆಕ್ಟ್ರಿಕ್ ಕಾರು ಉತ್ಪಾದನೆ ಮಾಡಲಾಗಿದೆ.

ಸುಲಭ ಸಾಲ, ಕಡಿಮೆ ಬಡ್ಡಿ, 999 ರೂ EMI; ಹೊಸ ಆಫರ್ ಘೋಷಿಸಿದ ಹೊಂಡಾ!.

ಹೊಂಡಾದ ನೂತನ ಎಲೆಕ್ಟ್ರಿಕ್ ಕಾರು ಮುಂದಿನ ತಿಂಗಳು ಜಪಾನ್ ಹಾಗೂ ಯೂರೋಪ್‌ನಲ್ಲಿ ಅನಾವರಣಗೊಳ್ಳುತ್ತಿದೆ. ಆಕ್ಟೋಬರ್ ಅಂತ್ಯದಲ್ಲಿ ನೂತನ ಹೊಂಡಾ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗಲಿದೆ. ಸದ್ಯ ನಾರ್ತ್ ಅಮೆರಿಕಾ ಹಾಗೂ ಚೀನಾದಲ್ಲಿ ಬಿಡುಗಡೆ ಮಾಡುವ ಪ್ಲಾನ್ ಹೊಂಡಾ ಮುಂದಿಲ್ಲ. ಆದರೆ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಮಾಡಲು ಹೊಂಡಾ ಚಿಂತನೆ ನಡೆಸಿದೆ.

Latest Videos
Follow Us:
Download App:
  • android
  • ios