ನವದೆಹಲಿ(ನ.24); ಕೇಂದ್ರ ಸರ್ಕಾರ ಈಗಾಗಲೇ ಎಲೆಕ್ಟ್ರಿಕ್ ವಾಹನ ಬಳಕೆಗೆ ಹಲವು ಯೋಜನೆ ಜಾರಿಗೆ ತಂದಿದೆ.  ಇದೀಗ ಎಲೆಕ್ಟ್ರಿಕ್ ವಾಹನ ಖರೀದಿಸಿದವರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಮತ್ತೊಂದು ಹೆಚ್ಚಿ ಇಟ್ಟಿದೆ. ದೇಶಾದ್ಯಂತ 69,000 ಸಾವಿರ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ವ್ಯವಸ್ಥೆಗೆ ಕೇಂದ್ರ ಮುಂದಾಗಿದೆ.

ಸತತ 4ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನಗರ, ಹೆದ್ದಾರಿ ಸೇರಿದಂತೆ ಪ್ರಮುಖ ಪೆಟ್ರೋಲ್ ಬಂಕ್‌ಗಳಲ್ಲಿ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ಅಳವಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶಾದ್ಯಂತ 69,000 ಪೆಟ್ರೋಲ್ ಬಂಕ್‌ಗಳಲ್ಲಿ ಇದೀಗ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ಅಳವಡಿಸಲಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಶನ್ ಅಳವಡಿಕೆಯಿಂದ ಇದೀಗ ದೇಶದ ಎಲೆಕ್ಟ್ರಿಕ್ ವಾಹನ ಮಾಲೀಕರ ಎದುರಾಗವು ಸಮಸ್ಯೆಗೆ ಪರಿಹಾರ ಸಿಗಲಿದೆ. ಶೀಘ್ರದಲ್ಲೇ ಚಾರ್ಜಿಂಗ್ ಸ್ಟೇಶನ್ ಅಳವಡಿಕೆ ನಡೆಯಲಿದೆ. ಆದರೆ ನಿಯಮಿತಿ ಅವಧಿಯಲ್ಲಿ ಪೂರ್ಣಗೊಳಿಸುವ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಇದರ ಜೊತೆಗೆ ಭಾರತವನ್ನು ಆಟೋಮೊಬೈಲ್ ಹಬ್ ಮಾಡುವುದಾಗಿ ಗಡ್ಕರಿ ಹೇಳಿದ್ದಾರೆ.