ಆ.7 ರಿಂದ ಕಿಯಾ ಸೊನೆಟ್ ಕಾರಿನ ಬುಕಿಂಗ್ ಆರಂಭ!
ಮಾರುತಿ ಬ್ರೆಜಾ ಸೇರಿದಂತೆ ಸಬ್‌ಕಾಂಪಾಕ್ಟ್ SUV ಕಾರಿಗೆ ಪ್ರತಿಸ್ಪರ್ಧಿಯಾಗಿ ಕಿಯಾ ಮೋಟಾರ್ಸ್ ಸೊನೆಟ್ ಕಾರು ಬಿಡುಗಡೆ ಮಾಡುತ್ತಿದೆ. ಆಗಸ್ಟ್ 7 ರಿಂದ ಕಾರು ಅನಾವರಣಗೊಳ್ಳಲಿದೆ. ಇದೇ ದಿನದಿಂದ ಬುಕಿಂಗ್ ಕೂಡ ಆರಂಭಗೊಳ್ಳಲಿದೆ. ನೂತನ ಕಾರಿನ ವಿಶೇಷತೆ, ಬೆಲೆ ಕುರಿತ ಮಾಹಿತಿ ಇಲ್ಲಿದೆ.
ಅನಂತಪುರಂ(ಜು.28); ಕಿಯಾ ಮೋಟಾರ್ಸ್ ಭಾರತದಲ್ಲಿ ಸೆಲ್ಟೋಸ್ ಕಾರು ಬಿಡುಗಡೆ ಮಾಡಿ ಯಶಸ್ಸು ಸಾಧಿಸಿದೆ. ಇದರ ಬಳಿಕ ಕಾರ್ನಿವಲ್ MPV ಕಾರು ಬಿಡುಗಡೆ ಮಾಡಿದೆ. ಇದೀಗ ಕಿಯಾ ಮೋಟಾರ್ಸ್ ಸೊನೆಟ್ ಸಬ್‌ಕಾಂಪಾಕ್ಟ್ SUV ಕಾರು ಬಿಡುಗಡೆ ಮಾಡುತ್ತಿದೆ. ಆಗಸ್ಟ್ 7 ರಿಂದು ಕಾರು ವಿಶ್ವದಾದ್ಯಂತ ಅನಾವರಣಗೊಳ್ಳಲಿದೆ. ಇದೇ ದಿನ ಡೀಲರ್‌ಗಳು ಬುಕಿಂಗ್ ಆರಂಭಿಸುವುದಾಗಿ ಹೇಳಿದ್ದಾರೆ.
ಎಂಜಿ, ಹ್ಯುಂಡೈ ಪ್ರತಿಸ್ಪರ್ಧಿಯಾಗಿ ಬರುತ್ತಿದೆ ಕಿಯಾ ಸೆಲ್ಟೋಸ್ ಎಲೆಕ್ಟ್ರಿಕ್ ಕಾರು!.
ಆಗಸ್ಟ್ 7 ರಂದು ಅನಾವರಣಗೊಳ್ಳಲಿರುವ ಕಿಯಾ ಸೊನೆಟ್ ಕಾರು ಸೆಪ್ಟೆಂಬರ್ ತಿಂಗಳಿನಿಂದ ಮಾರಾಟ ಆರಂಭಿಸಲಿದೆ. ಈಗಾಲೇ ಸೊನೆಟ್ ಕಾರಿನ ಟೀಸರ್ ಬಿಡುಗಡೆ ಮಾಡಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ನೂತನ ಕಾರು 3 ವೇರಿಯೆಂಟ್ ಎಂಜಿನ್ ಆಯ್ಕೆ ಇರಲಿದೆ. 1.2 ಲೀಟರ್ ಪೆಟ್ರೋಲ್, 1.5 ಲೀಟರ್ ಡೀಸೆಲ್ ಹಾಗೂ 1.0 ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಇರಲಿದೆ.
ನೂನತ ಕಿಯಾ ಸೊನೆಟ್ ಕಾರಿನ ಬೆಲೆ 7 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ)ನಿಂದ ಗರಿಷ್ಠ 12 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ) ವರೆಗೆ ಇರಲಿದೆ ಎಂದು ಅಂದಾಜಿಸಲಾಗಿದೆ. ಮಾರುತಿ ಬ್ರೆಜಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರ XUV300, ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಸಬ್ ಕಾಂಪಾಕ್ಟ್ SUV ಕಾರುಗಳಿಗೆ ಪ್ರತಿಸ್ಪರ್ಧಿಯಾಗಿದೆ.