ನವದೆಹಲಿ(ಫೆ.28): 2020ರ ಆಟೋ ಎಕ್ಸ್ಪೋದಲ್ಲಿ ಹಲವು ಎಲೆಕ್ಟ್ರಿಕ್ ಕಾರು ಅನಾವರಣಗೊಂಡರೆ, ಕೆಲ ಕಾರುಗಳು ಬಿಡುಗಡೆಯಾಗಿದೆ. ಭಾರತದಲ್ಲಿ ಮೊದಲು ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿದ ಹೆಗ್ಗಳಿಕೆ ಮಹೀಂದ್ರ ಪಾಲಿಗಿದೆ. ರೇವಾ,  E2O, E2O ಪ್ಲಸ್, ಇ ವೆರಿಟೋ, ಆಟೊಮ್, KUV100, ಟ್ರಿಯೋ ಆಟೋರಿಕ್ಷಾ ಎಲೆಕ್ಟ್ರಿಕ್ ವಾಹನ ಯಶಸ್ವಿಯಾಗಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: 21 ಸಾವಿರಕ್ಕೆ ಬುಕ್ ಮಾಡಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಈ ಬಾರಿಯ ಆಟೋ ಎಕ್ಸ್ಪೋದಲ್ಲಿ ಮಹೀಂದ್ರ   XUV300 ಎಲೆಕ್ಟ್ರಿಕ್ ಕಾರು ಅನಾವರಣ ಮಾಡಿತ್ತು. ಇದೀಗ ಈ ಕಾರಿನ ಮೈಲೇಜ್ ಬಹಿರಂಗವಾಗಿದೆ. ಸಂಪೂರ್ಣ ಚಾರ್ಜ್‌ಗೆ ಮಹೀಂದ್ರ  XUV300 ಎಲೆಕ್ಟ್ರಿಕ್ ಕಾರು 370 ಕಿ.ಮೀ ಮೈಲೇಜ್ ರೇಂಜ್ ನೀಡಲಿದೆ. 

ಇದನ್ನೂ ಓದಿ: ಬೆಲೆ 6 ಲಕ್ಷ, ಚೀನಾದ R1 ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಅನಾವರಣ!

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಸಂಪೂರ್ಣ ಚಾರ್ಜ್‌ಗೆ 312 ಕಿ.ಮೀ ಮೈಲೇಜ್ ನೀಡಲಿದೆ. ಮಹೀಂದ್ರ ಇದೀಗ 350 ರಿಂದ 500 ಕಿ.ಮೀ ಮೈಲೇಜ್ ನೀಡಬಲ್ಲ ತಂತ್ರಜ್ಞಾನ ಅಭಿವೃದ್ದಿ ಪಡಿಸುತ್ತಿದೆ. ಈ ಮೂಲಕ ಗರಿಷ್ಠ ಮೈಲೇಜ್ ಮೂಲಕ ಭಾರತದ ಮಾರುಕಟ್ಟೆ ಆಕ್ರಮಿಸಿಕೊಳ್ಳಲು ಸಜ್ಜಾಗಿದೆ.