ರಾಯಲ್ ಎನ್‌ಫೀಲ್ಡ್ ಬೈಕ್ ಖರೀದಿಸಲು ಮತ್ತೆ ಗ್ರಾಹಕರು ಮುಗಿ ಬೀಳುತ್ತಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ 70 ಸಾವಿರಕ್ಕೂ ಅಧಿಕ ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟವಾಗೋ ಮೂಲಕ ದಾಖಲೆ ಬರೆದಿದೆ.
ನವದಹೆಲಿ(ನ.02): ಭಾರತೀಯರ ನೆಚ್ಚಿನ ಬೈಕ್ ಆಗಿ ಹೊರಹೊಮ್ಮಿರುವ ರಾಯಲ್ ಎನ್‌ಫೀಲ್ಡ್ ಬೈಕ್ ಕಳೆದ ತಿಂಗಳಲ್ಲಿ ಮಾರಾಟದಲ್ಲಿ ದಾಖಲೆ ಬರೆದಿದೆ. 2018ರ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 70,451 ಬೈಕ್ ಮಾರಾಟವಾಗಿದೆ. ಈ ಮೂಲಕ ದಾಖಲೆ ಬರೆದಿದೆ.
ನವರಾತ್ರಿ ಸೇರಿದಂತೆ ಸಾಲು ಸಾಲು ಹಬ್ಬಗಳ ಪ್ರಯುಕ್ತ ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟದಲ್ಲಿ ಏರಿಕೆ ಕಂಡಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಚೆನ್ನೈ ರಾಯಲ್ ಎನ್‌ಫೀಲ್ಡ್ ಘಟಕದಲ್ಲಿ ಕಾರ್ಮಿಕರ ಪ್ರತಿಭಟನೆಯಿಂದ 25,000 ಬೈಕ್ ನಿರ್ಮಾಣ ಸ್ಥಗಿತಗೊಂಡಿತ್ತು. ಇದರ ಹೊರತಾಗಿಯೂ ರಾಯಲ್ ಎನ್‌ಫೀಲ್ಡ್ ಮಾರಾಟದಲ್ಲಿ ಅಗ್ರಸ್ಥಾನ ಕಾಪಾಡುವಲ್ಲಿ ಯಶಸ್ವಿಯಾಗಿದೆ.
ಅಕ್ಟೋಬರ್‌ನಲ್ಲಿ ದೇಶಿ ಮಾರುಕಟ್ಟೆಯಲ್ಲಿ ಗರಿಷ್ಠ ಮಾರಾಟವಾಗಿರುವ ರಾಯಲ್ ಎನ್‌ಫೀಲ್ಡ್ ರಫ್ತುವಿನಲ್ಲಿ ನಿರೀಕ್ಷಿತ ಮಾರಾಟ ಕಂಡಿಲ್ಲ. ಅಕ್ಟೋಬರ್‌ನಲ್ಲಿ 407 ಬೈಕ್‌ಗಳು ಇತರ ದೇಶಗಳಿಗೆ ರಫ್ತಾಗಿದೆ.
ಶೀಘ್ರದಲ್ಲೇ ರಾಯಲ್ ಎನ್‌ಫೀಲ್ಡ್ 650 ಏರ್ ಕೂಲ್‌ಡ್ ಟ್ವಿನ್ ಎಂಜಿನ್ ಬೈಕ್ ಬಿಡುಗಡೆ ಮಾಡುತ್ತಿದೆ. ಭಾರತ ಸೇರಿದಂತೆ ಇತರ ದೇಶಗಳಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ. (ಚೆನ್ನೈ ಘಟಕದ ಕಾರ್ಮಿಕರ ಪ್ರತಿಭಟನೆಯಿಂದ ವಿದೇಶದಲ್ಲಿ ಎನ್‌ಫೀಲ್ಡ್ 650 ಬೈಕ್ ಡೆಲಿವರಿ ವಿಳಂಭವಾಗೋ ಸಾಧ್ಯತೆ ಇದೆ)
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 2, 2018, 2:34 PM IST