ನವದೆಹಲಿ(ಜ.04): ಟಾಟಾ ಮೋಟಾರ್ಸ್ ಭಾರತದಲ್ಲಿ ಎಲೆಕ್ಟ್ರಿಕ್ ಕಾರಿನಲ್ಲಿ ಕ್ರಾಂತಿ ಮಾಡಲು ರೆಡಿಯಾಗಿದೆ. ಈಗಾಗಲೇ ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿರುವ ಟಾಟಾ ಮೋಟಾರ್ಸ್, ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಲಾಂಚ್‌ಗೆ ಮುಹೂರ್ತ ನಿಗದಿ ಮಾಡಿದೆ. ಇದರ ಬೆನ್ನಲ್ಲೇ ಟಾಟಾ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಬಿಡುಗಡೆ ದಿನಾಂಕವನ್ನು ಬಹಿರಂಗ ಪಡಿಸಿದೆ.

ಇದನ್ನೂ ಓದಿ: TATA ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಬೆಲೆ ಬಹಿರಂಗ- i20,ಬಲೆನೋಗಿಂತ ಕಡಿಮೆ!

ಕಡಿಮೆ ಬೆಲೆ, ಹೆಚ್ಚು ಮೈಲೇಜ್ ಇದು ಟಾಟಾ ಬಿಡುಗಡೆ ಮಾಡಲಿರುವ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ವಿಶೇಷತೆ. ಆತ್ಯಂತ ಆಕರ್ಷಕ ಹ್ಯಾಚ್‌ಬ್ಯಾಕ್ ಎಲೆಕ್ಟ್ರಿಕ್ ಕಾರು ಅನ್ನೋ ಹೆಗ್ಗಳಿಕೆಗೆ ಅಲ್ಟ್ರೋಜ್ ಪಾತ್ರವಾಗಿದೆ. ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರು ವಿಭಾಗದ ಅಧ್ಯಕ್ಷ ಶೈಲೇಶ್ ಚಂದ್ರ ಅಲ್ಟ್ರೋಝ್ ಇವಿ ಕಾರಿನ ಕುರಿತು ಮಾಹಿತಿ ಬಹಿರಂಗ ಪಡಿಸಿದ್ದಾರೆ. 12 ರಿಂದ 18 ತಿಂಗಳಲ್ಲಿ ಟಾಟಾ ಅಲ್ಟ್ರೋಝ್ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗಲಿದೆ ಎಂದು ಖಚಿತಪಡಿಸಿದ್ದಾರೆ. ಅಂದರೆ 2021ರ ಮಧ್ಯಭಾಗದಲ್ಲಿ ಅಲ್ಟ್ರೋಝ್ ಕಾರು ಭಾರತದ ರಸ್ತೆಗಳಿಯಲಿದೆ.

ಇದನ್ನೂ ಓದಿ:  ಸೇಫ್ಟಿಗೆ ಮೊದಲ ಆದ್ಯತೆ- 5 ಸ್ಟಾರ್ ಕಾರನ್ನೇ ನೀಡುತ್ತೇವೆ: ರತನ್ ಟಾಟಾ

ಅಲ್ಟ್ರೋಝ್ ಕಾರು ಒಂದು ಬಾರಿ ಚಾರ್ಜ್ ಮಾಡಿದರೆ 250 ರಿಂದ 300 ಕಿ.ಮೀ ಪ್ರಯಾಣದ ರೇಂಜ್ ನೀಡಲಿದೆ. ಈ ಕಾರಿನ ಬೆಲೆ 10 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಕ್ವಿಕ್ ಚಾರ್ಜಿಂಗ್ ಮೂಲಕ 1 ಗಂಟೆಯಲ್ಲಿ ಶೇಕಡಾ 80 ರಷ್ಟು ಚಾರ್ಜ್ ಆಗಲಿದೆ.