ಮುಂಬೈ(ಜ.24): ಟಾಟಾ ಮೋಟಾರ್ಸ್ ಈಗಾಗಲೇ ಟಿಗೋರ್ ಎಲೆಕ್ಟ್ರಿಕ್ ಕಾರು ಹೊರತಂದಿದೆ. ಇದೀಗ ಮೊದಲ ಎಲೆಕ್ಟ್ರಿಕ್ SUV ಕಾರು ಬಿಡುಗಡೆ ಮಾಡುತ್ತಿದೆ. ಎಂಜಿ ZS ಎಲೆಕ್ಟ್ರಿಕ್ ಕಾರು ಬಿಡುಗಡೆ ಬೆನ್ನಲ್ಲೇ ಇದೀಗ ಟಾಟಾ ನೆಕ್ಸಾನ್ ಬಿಡುಗಡೆಯಾಗುತ್ತಿದೆ. ಜನವರಿ 28 ರಂದು ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾರುಕಟ್ಟೆ ಪ್ರವೇಶಿಸಲಿದೆ.

ಇದನ್ನೂ ಓದಿ: ದಾಖಲೆ ಬರೆದ ಟಾಟಾ ಟಿಗೋರ್ EV; 2019ರಲ್ಲಿ ಗರಿಷ್ಠ ಮಾರಾಟವಾದ ಕಾರು!

ನೆಕ್ಸಾನ್ EV ಕಾರಿನ ಬುಕಿಂಗ್ ಆರಂಭಗೊಂಡಿದೆ. 21,000 ರೂಪಾಯಿ ನೀಡಿ ಭಾರತದ ಕಡಿಮೆ ಬೆಲೆ SUV ಎಲೆಕ್ಟ್ರಿಕ್ ಕಾರನ್ನು ಬುಕ್ ಮಾಡಿಕೊಳ್ಳಬಹುದು. ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆ15 ಲಕ್ಷ ರೂಪಾಯಿಂದ ಆರಂಭವಾಗಲಿದ್ದು, ಗರಿಷ್ಠ ಬೆಲೆ 17 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ).

ಇದನ್ನೂ ಓದಿ: ಕಡಿಮೆ ಬೆಲೆ; ಟಾಟಾ ಅಲ್ಟ್ರೋಝ್ ಎಲೆಕ್ಟ್ರಿಕ್ ಕಾರು ಲಾಂಚ್ ಡೇಟ್ ಬಹಿರಂಗ!.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಲಿಥಿಯಂ ಐಯಾನ್ ಬ್ಯಾಟರಿ, ಲಿಕ್ವಿಡ್ ಕೂಲ್ಡ್ IP67 ಸರ್ಟಿಫೈಡ್ ಹೊಂದಿದೆ. 30.2 kWh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, ಒಂದು ಬಾರಿ ಚಾರ್ಜ್ ಮಾಡಿದರೆ 300 ಕಿ.ಮೀ ಮೈಲೇಜ್ ರೇಂಜ್ ನೀಡಲಿದೆ. ಫಾಸ್ಟ್ ಚಾರ್ಜಿಂಗ್ ಮೂಲಕ 60 ನಿಮಿಷದಲ್ಲಿ ಶೇಕಡಾ 80 ರಷ್ಟು ಚಾರ್ಜ್ ಆಗಲಿದೆ. ಮನೆಯಲ್ಲಿರುವ ಸಾಕೆಟ್ ಮೂಲಕ ಚಾರ್ಜಿಂಗ್ ಮಾಡುವುದಾದರೆ ಸಂಪೂರ್ಣ ಚಾರ್ಜ್‌ಗೆ 8 ಗಂಟೆ ಸಮಯ ತೆಗೆದುಕೊಳ್ಳಲಿದೆ.

ಇದನ್ನೂ ಓದಿ: ಟಾಟಾ ಅಲ್ಟ್ರೋಜ್ ಬಿಡುಗಡೆ; ಕಡಿಮೆ ಬೆಲೆ, ಅತ್ಯಂತ ಸುರಕ್ಷತೆಯ ಕಾರು!

ಶೇಕಡಾ 50 ರಷ್ಟು ಚಾರ್ಜ್‌ನಲ್ಲಿ 150 ಕಿ.ಮೀ ಮೈಲೇಜ್ ನೀಡಲಿದೆ. ಡ್ಯುಯೆಲ್ ಏರ್‌ಬ್ಯಾಗ್, ABS ಹಾಗೂ EBD, ರಿವರ್ಸ್ ಪಾರ್ಕಿಂಗ್ ಕ್ಯಾಮರ, ಸೀಟ್ ಬೆಲ್ಟ್ ಅಲರ್ಟ್, ಹೈ ಸ್ಪೀಡ್ ಅಲರ್ಟ್, ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಸುರಕ್ಷತಾ ಫೀಚರ್ಸ್ ಎಲ್ಲಾ ವೇರಿಯೆಂಟ್ ಕಾರಿನಲ್ಲಿದೆ.