ದಾಖಲೆ ಬರೆದ ಟಾಟಾ ಟಿಗೋರ್ EV; 2019ರಲ್ಲಿ ಗರಿಷ್ಠ ಮಾರಾಟವಾದ ಕಾರು!
ಎಲೆಕ್ಟ್ರಿಕ್ ಕಾರು ಮಾರುಕಟ್ಟೆ ಮೇಲೆ ಕಣ್ಣಿಟ್ಟಿರುವ ಟಾಟಾ ಇದೀಗ ನೆಕ್ಸಾನ್ ಸೇರಿದಂತೆ ಕೆಲ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುತ್ತಿದೆ. ಇದರ ಬೆನ್ನಲ್ಲೇ, ಟಾಟಾ ಮೋಟಾರ್ಸ್ ಮತ್ತೊಂದು ದಾಖಲೆ ಬರೆದಿದೆ. ಟಾಟಾ ಟಿಗೋರ್ EV ಕಾರು 2019ರಲ್ಲಿ ಗರಿಷ್ಠ ಮಾರಾಟವಾದ ಕಾರು ಅನ್ನೋ ಹೆಗ್ಗಳಿಗೆ ಪಾತ್ರವಾಗಿದೆ.
ಮುಂಬೈ(ಜ.19): ಭಾರತದಲ್ಲಿ ಎಲೆಕ್ಟ್ರಿಕ್ ವಾಹನಕ್ಕೆ ಹೆಚ್ಚಿನ ಉತ್ತೇಜ ನೀಡಲಾಗುತ್ತಿದೆ. 2019ರಲ್ಲಿ ವಾಹನ ಮಾರಾಟ ಕುಸಿತ ಕಂಡರೂ ಎಲೆಕ್ಟ್ರಿಕ್ ವಾಹನಗಳ ಮಾರಟ ಸಮಾಧಾನ ತಂದಿದೆ. 2019ರ ಎಪ್ರಿಲ್‌ನಿಂದ ಡಿಸೆಂಬರ್ ವರೆಗಿನ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಟಿಗೋರ್ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಟಾಟಾ ಮೋಟಾರ್ಸ್ ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆ ಆಕ್ರಮಿಸಿಕೊಳ್ಳುವ ಎಲ್ಲಾ ಸೂಚನೆ ನೀಡಿದೆ.
ಇದನ್ನೂ ಓದಿ: ಹೆಚ್ಚು ಮೈಲೇಜ್, ಕಡಿಮೆ ಬೆಲೆ; ಟಾಟಾ ಬಿಡುಗಡೆ ಮಾಡಿದೆ ಹೊಸ ಕಾರು!...
2019ರಲ್ಲಿ ಹ್ಯುಂಡೈ ಕೋನಾ, ಮಹೀಂದ್ರ ಇ ವೆರಿಟೋ ಸೇರಿದಂತೆ ಕೆಲ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗಿತ್ತು. ಆದರೆ ಈ ಎಲ್ಲಾ ಕಾರುಗಳನ್ನು ಹಿಂದಿಕ್ಕಿದ್ದ ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರು ಮೊದಲ ಸ್ಥಾನ ಅಲಂಕರಿಸಿದೆ. 2019ರಲ್ಲಿ ಟಾಟಾ ಟಿಗೋರ್ ಎಲೆಕ್ಟ್ರಿಕ್ 669 ಕಾರು ಮಾರಾಟವಾಗಿದೆ.
ಇದನ್ನೂ ಓದಿ: ನೂತನ ಟಾಟಾ ಟಿಗೋರ್ ಕಾರು ಬಿಡುಗಡೆ-ಬೆಲೆ ಕೇವಲ 5.20 ಲಕ್ಷ!
ಟಾಟಾ ಟಿಗೋರ್ ಕಾರು ಸಂಪೂರ್ಣ ಚಾರ್ಜ್‌ಗೆ 213 ಕಿ.ಮೀ ಮೈಲೇಜ್ ರೇಂಜ್ ನೀಡುತ್ತದೆ. ಇದರಲ್ಲಿ ಮೂರು ವೇರಿಯೆಂಟ್ ಲಭ್ಯವಿದೆ. XE+, XM+ ಹಾಗೂ XT+ ವೇರಿಯೆಂಟ್ ಕಾರು ಲಭ್ಯವಿದೆ. ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆ 9.44 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ) ನಿಂದ 12.59 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ).