ಟೊಯೊಟಾ ಇನೋವಾ, ಮಾರುತಿ ಎರ್ಟಿಗಾ ಕಾರಿಗೆ ಪ್ರತಿಸ್ಪರ್ಧಿಯಾಗಿ ರೆನಾಲ್ಟ್ ನೂತನ ಕಾರು ಬಿಡುಗಡೆ ಮಾಡುತ್ತಿದೆ. ಕ್ವಿಡ್ ರೀತಿಯಲ್ಲೇ ಕಡಿಮೆ ಬೆಲೆಯಲ್ಲಿ ಕಾರು ಬಿಡುಗಡೆ ಮಾಡಲಿದೆ. ಈ ಕಾರಿನ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ನವದೆಹಲಿ(ಏ.10): ರೆನಾಲ್ಟ್ ಕಾರು ಕಂಪನಿಯ ಕ್ವಿಡ್ ಕಾರು ಮಾರಾಟದಲ್ಲಿ ದಾಖಲೆ ಬರೆದಿದೆ. ಕಡಿಮೆ ಬೆಲೆಯಲ್ಲಿ ಸಣ್ಣ ಕಾರು ನೀಡೋ ಮೂಲಕ ರೆನಾಲ್ಟ್ ಎಲ್ಲರ ಮನಗೆದ್ದಿದೆ. ಇದೀಗ ರೆನಾಲ್ಟ್ ಕ್ವಿಡ್ ಮಾದರಿಯಲ್ಲೇ ಕಡಿಮೆ ಬೆಲೆ ಹಾಗೂ ಗರಿಷ್ಠ ಉಪಯೋಗಿಸಬಲ್ಲ MPV ಕಾರು ಬಿಡುಗಡೆ ಮಾಡಲು ಮುಂದಾಗಿದೆ. ಈ ಮೂಲಕ ಟೊಯೊಟಾ ಇನೋವಾ, ಮಾರುಟಿ ಎರ್ಟಿಗಾ ಕಾರಿಗೆ ಪೈಪೋಟಿ ನೀಡಲು ಸಜ್ಜಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ಓದಿ:ರೆನಾಲ್ಟ್ ಕ್ವಿಡ್ ಬೆಲೆ ಹೆಚ್ಚಳ- ಏಪ್ರಿಲ್‌ನಿಂದ ಹೊಸ ಬೆಲೆ ಅನ್ವಯ!
ನೂತನ ಕಾರಿಗೆ ಸದ್ಯ ರೆನಾಲ್ಡ್ ಟ್ರೈಬರ್ ಎಂದು ನಾಮಕರಣ ಮಾಡಲಾಗಿದೆ. ಈ ಕಾರಿನ ಬೆಲೆ ಕೇವಲ 5.5 ಲಕ್ಷ ರೂಪಾಯಿ(ಎಕ್ಸ್ ಶೋ ರೂಂ). ಇದು ಭಾರತದಲ್ಲಿರುವ ಅತ್ಯಂತ ಕಡಿಮೆ ಬೆಲೆಯ MPV ಕಾರು. ಜುಲೈನಲ್ಲಿ ಈ ಕಾರು ಬಿಡುಗಡೆಯಾಗಲಿದೆ. ಅತ್ಯುತ್ತಮ ಗುಣಮಟ್ಟ, ಮೈಲೇಜ್ ಹಾಗೂ ಗರಿಷ್ಠ ಸುರಕ್ಷತೆ ನೀಡಲಿದೆ ಎಂದು ಕಂಪನಿ ಹೇಳಿದೆ.
Scroll to load tweet…
Scroll to load tweet…
