ವಿವಿಯ ಬಿಎಸ್ಸಿ (ತೋಟಗಾರಿಕೆ) 3ನೇ ವರ್ಷದ 1 ಸೆಮೆಸ್ಟರ್ ಪರೀಕ್ಷೆ ಮುಂದೂಡಿಕೆ|ಅಯೋಧ್ಯೆ ತೀರ್ಪು ಪ್ರಕಟ|ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ| ರಾಜ್ಯದ 9 ಕಾಲೇಜುಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳೂ ಸಹ ಮುಂದೂಡಿಕೆ|

ಬಾಗಲಕೋಟೆ(ನ.9): ಇಂದು ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ವಿವಿ ಕುಲಸಚಿವರು ಮಾಹಿತಿ ನೀಡಿದ್ದಾರೆ. 
ವಿವಿಯ ಬಿಎಸ್ಸಿ (ತೋಟಗಾರಿಕೆ) 3ನೇ ವರ್ಷದ 1 ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಜೊತೆಗೆ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರು ರಜೆ ಘೋಷಣೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಯೋಧ್ಯೆ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಇನ್ನು ರಾಜ್ಯದ 9 ಕಾಲೇಜುಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳೂ ಸಹ ಮುಂದೂಡಿಕೆಯಾಗಿವೆ.