ಬಾಗಲಕೋಟೆಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆ
ಭಿನ್ನಾಭಿಪ್ರಾಯ ಹಾಗೂ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಗಲಾಟೆ| ಸಂಭವಿಸಿ ಓರ್ವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ| ಆರು ಜನರಿಗೆ ಸಣ್ಣಪುಟ್ಟ ಗಾಯ|ತಾಲೂಕಿನ ಬೇವೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ| ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ|
ಬಾಗಲಕೋಟೆ[ಅ.16]: ವಾಲ್ಮೀಕಿ ಜಯಂತಿ ಆಚರಣೆ ಸಂದರ್ಭದಲ್ಲಿನ ಭಿನ್ನಾಭಿಪ್ರಾಯ ಹಾಗೂ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಗಲಾಟೆ ಸಂಭವಿಸಿ ಓರ್ವನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇನ್ನುಳಿದ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ತಾಲೂಕಿನ ಬೇವೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಬೇವೂರು ಗ್ರಾಮದ ಶಿವಪ್ಪ ಪೂಜಾರಿ (45) ಮೃತ ವ್ಯಕ್ತಿ. ಈತ ಗುಳೇದಗುಡ್ಡದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಘಟಕದಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಇತ್ತೀಚೆಗೆ ನಡೆದ ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಉಂಟಾದ ಸಣ್ಣ ಘಟನೆಯನ್ನು ತಪ್ಪಾಗಿ ಭಾವಿಸಿದ ಕೆಲವರು ಸೋಮವಾರ ತಡರಾತ್ರಿ ಅಂದಿನ ಘಟನೆಯನ್ನು ಮತ್ತೆ ವಿಚಾರಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಘರ್ಷಣೆಯಲ್ಲಿ ಆರು ಜನರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘರ್ಷಣೆಯಲ್ಲಿ ಸಾವಿಗೀಡಾದ ಶಿವಪ್ಪ ಪೂಜಾರಿಯ ಮರಣೋತ್ತರ ಪರೀಕ್ಷೆಯನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆಸಲಾಯಿತು. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.