Asianet Suvarna News Asianet Suvarna News

ಬಾಗಲಕೋಟೆ: 1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚರಂತಿಮಠ ಚಾಲನೆ

ನವನಗರ, ವಿದ್ಯಾಗಿರಿ ಸೇರಿದಂತೆ ವಿವಿಧೆಡೆ ಭೂಮಿಪೂಜೆ ನೆರವೇರಿಸಿದ ಶಾಸಕ ಚರಂತಿಮಠ| ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು| ಕಳಪೆ ಕಾಮಗಾರಿಗಳು ಕಂಡು ಬಂದರೆ ಅಂತಹ ಗುತ್ತಿಗೆದಾರರ ಪರವಾನಿಗೆಯನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು|

MLA Veeranna Charantimath Talked about Development Works in Bagalkot
Author
Bengaluru, First Published Oct 29, 2019, 3:04 PM IST

ಬಾಗಲಕೋಟೆ(ಅ.29): ನವನಗರ, ವಿದ್ಯಾಗಿರಿ ಸೇರಿದಂತೆ ಬಾಗಲಕೋಟೆ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್‌ಗಳಲ್ಲಿ 2019-20ನೇ ಸಾಲಿನ ಎಸ್‌ ಎಫ್‌ ಸಿ ಹಾಗೂ 14ನೇ ಹಣಕಾಸು ಆಯೋಗದಲ್ಲಿ ತೆಗೆದುಕೊಂಡ ಒಂದು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೀರಣ್ಣ ಚರಂತಿಮಠ ಅವರು ಭಾನುವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನವನಗರದ ವಾರ್ಡ್‌ 21ರ ರಾಜೀವಗಾಂಧಿ ಆಶ್ರಯ ಕಾಲೋನಿ, ವಾರ್ಡ್‌ 22ರ ವಾಂಬೆ ಕಾಲೋನಿ, ವಾರ್ಡ್‌ 25, 26,29,31,19,32,33,34ನೇ ವಾರ್ಡ್‌ಗಳಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಅನುದಾನದ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಿದರು.

ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ವೀರಣ್ಣ ಚರಂತಿಮಠ ಅವರು ಕಾಮಗಾರಿಗಳನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಕಳಪೆ ಕಾಮಗಾರಿಗಳನ್ನು ಮಾಡಬಾರದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಕಾಮಗಾರಿಗಳು ಕಂಡು ಬಂದರೆ ಅಂತಹ ಗುತ್ತಿಗೆದಾರರ ಪರವಾನಿಗೆಯನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಸಿದರು.

ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಾಮಗಾರಿಗಳನ್ನು ಕಾಲಕಾಲಕ್ಕೆ ಪರಿಶೀಲನೆ ಮಾಡಬೇಕೆಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾಂಬೆ ಹಾಗೂ ಆಶ್ರಯ, ವಾಜಪೇಯಿ, ರಾಜೀವಗಾಂಧಿ ಕಾಲೋನಿಯಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಹರಿಸಬೇಕು. ಸಾರ್ವಜನಿಕರು ನಗರಸಭೆ ಸಿಬ್ಬಂದಿಗೆ ಸಹಕಾರ ನೀಡಬೇಕೆಂದು ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಸದ್ಯ ವಿದ್ಯಾಗಿರಿ ಹಾಗೂ ನವನಗರದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಬಾಗಲಕೋಟೆ ಹಳೇ ಭಾಗದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ, ಖಾಜಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ ನಗರಸಭೆ ಸದಸ್ಯರಾದ ಯಲ್ಲಪ್ಪ ನಾರಾಯಣಿ, ಪಾರ್ವತಿ ಅಕ್ಕಿಮರಡಿ, ಶೋಭಾ ರಾವ, ಭುವನೇಶ್ವರಿ ಕುಪ್ಪಸ್ತ, ವೀರಪ್ಪ ಸಿರಗನ್ನವರ್‌,ಸವಿತಾ ಲೆಂಕನ್ನವರ್‌, ಸೀಮಾ ಕೌಸರ ನದಾಫ,ಬಸವರಾಜ ಅವರಾದಿ, ರವಿ ದಾಮಜಿ, ಪ್ರಕಾಶ ತಪಶೆಟ್ಟಿ, ಜಿ ಎನ್‌ ಪಾಟೀಲ, ಶೈಲು ಅಂಗಡಿ ರಾಜು ರೇವಣಕರ, ರಾಜು ಗೌಳಿ ಸೇರಿದಂತೆ ಉಮೇಶ ಹಂಚನಾಳ, ಸಂಗಪ್ಪ ಹಿತ್ತಲಮನಿ ಇನ್ನಿತರರು ಇದ್ದರು.
 

Follow Us:
Download App:
  • android
  • ios