ಬೆಂಗಳೂರು [ಅ.11]:  ಬಾದಾಮಿ ಜಿಲ್ಲೆಯ ಪಟ್ಟದಕಲ್ಲು ಗ್ರಾಮವನ್ನು ಸ್ಥಳಾಂತರ ಮಾಡುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ನೆರೆ ಪರಿಹಾರ ವಿಚಾರ ಚರ್ಚೆಗೆ ನಿಲುವಳಿ ಸೂಚನೆ ಮಂಡಿಸಿ ಮಾತನಾಡುವಾಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಟ್ಟದಲ್ಲು ಸೇರಿದಂತೆ ನೆರೆ ಪ್ರದೇಶಗಳ ಗ್ರಾಮಗಳ ಜನರು ಸ್ಥಳಾಂತರ ಮಾಡುವಂತೆ ಮನವಿ ಮಾಡುತ್ತಿದ್ದಾರೆ, ಇದಕ್ಕೆ ಸರ್ಕಾರದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಲೋಕೋಪಯೋಗಿ ಸಚಿವರೂ ಆದ ಗೋವಿಂದ ಕಾರಜೋಳ, 2009ರಲ್ಲಿ ಪ್ರವಾಹ ಬಂದಾಗ ಪಟ್ಟದಕಲ್ಲು ಗ್ರಾಮದ ಜನ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. 

ಈಗ ಪ್ರವಾಸೋದ್ಯಮ ಮತ್ತು ಪುರಾತತ್ವ ಇಲಾಖೆಯವರು ತೊಂದರೆ ಕೊಡುತ್ತಿರುವ ಕಾರಣಕ್ಕೆ ಸ್ಥಳಾಂತರಿಸುವಂತೆ ಕೇಳುತ್ತಿದ್ದಾರೆ. ಅವರ ಮನವಿಯಂತೆ ಸ್ಥಳಾಂತರ ಮಾಡುತ್ತೇವೆ ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನೆರೆ ಪರಿಹಾರ ನೀಡು ವಿಚಾರದಲ್ಲಿ ಒಂದೇ ಮನೆಯಲ್ಲಿ ಮೂರು ಕುಟುಂಬಗಳು ವಾಸವಿದ್ದರೂ ಪ್ರತ್ಯೇಕ ಪರಿಹಾರ ನೀಡಲಾಗುತ್ತಿದೆ. ರೇಷನ್‌ ಕಾರ್ಡ್‌, ಆಧಾರ್‌ ಕಾರ್ಡ್‌ ಆಧರಿಸಿ ಎಲ್ಲ ಕುಟುಂಬಗಳಿಗೂ ಪರಿಹಾರ ನೀಡಲಾಗುತ್ತಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.