ಬಾಗಲಕೋಟೆ(ಅ.28): ದೀಪಾವಳಿ ಹಬ್ಬದಂದೆ ದುರ್ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿ ಯುವಕನೊಬ್ಬ ನೀರುಪಾಲಾದ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನೀರು ಪಾಲಾದ ಯುವಕನನ್ನು ಫಕೀರಪ್ಪ ವಾಲೀಕಾರ (28) ಎಂದು ಗುರುತಿಸಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಶವಕ್ಕಾಗಿ ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಕತ್ತಲಾದ ಹಿನ್ನೆಲೆಯಲ್ಲಿ ಶೋಧಕಾರ್ಯವನ್ನು ಇಂದಿಗೆ(ಸೋಮವಾರ) ಮುಂದೂಡಿದ್ದಾರೆ. ಘಟನಾ ಸ್ಥಳಕ್ಕೆ ಕೆರೂರು ಪಿಎಸ್ಐ ಸಂಜಯ್ ತಿಪ್ಪರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.