ಬಳ್ಳಾರಿ(ಅ.28): ದೀಪಾವಳಿ ಅಮವಾಸ್ಯೆ ದಿನದಂದೇ ಗಣಿನಾಡಿನಲ್ಲಿ ಸೂತಕ ಛಾಯೆ ಆವರಿಸಿದೆ. ಹೌದು, ಬೊಲೆರೊ ಕ್ಯಾಂಟರ್ ಮತ್ತು  ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಡೂರು ತಾಲೂಕಿನ ಬಾಬ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮೃತರನ್ನು ಬುಸ್ಸಿ (21), ದಾದಾ ಕಲಂದರ (31), ಅಸ್ಲಾಂ (25) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಂಡೂರು ತಾಲೂಕಿನ ಯಶವಂತನಗರದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ದರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪರಶುರಾಮ (28) ಮತ್ತು ಮನ್ಸೂರ್ (30) ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇರ್ಫಾನ್ (32) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಂಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. 

ಯಶವಂತ‌ನಗರದಿಂದ ತೋರಣಗಲ್ಲಿನ‌ ಜಿಂದಾಲ್ ಹೋಗುತ್ತಿರುವ ವೇಳೆ ಈ ಅವಘಡ ಸಂಭವಿಸಿದೆ. ಈ ಸಂಬಂಧ  ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.