ಬಳ್ಳಾರಿ(ಅ.28): ಭಾನುವಾರ ರಾತ್ರಿಯಿಡಿ ಬಳ್ಳಾರಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶದಲ್ಲಿ ನೀರು ನಿಂತಿದೆ. ಇಬ್ರಾಹಿಂಪುರ, ಶಂಕರಬಂಡೆ, ಕಮ್ಮರಚೇಡು, ಬಬ್ಬಕುಂಟೆ, ಸಂಜೀವರಾಯನಕೋಟೆ, ಮಿಂಚೇರಿ ಗ್ರಾಮಗಳು ಜಲಾವೃತವಾಗಿವೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವರುಣನ ಅಬ್ಬರದಿಂದ ಸಂಜೀವರಾಯನ ಕೋಟೆ ಗ್ರಾಮದಲ್ಲಿ ಕೆರೆ ಕೋಡಿ ಒಡೆದ ಪರಿಣಾಮ ಮನೆಗಳಿಗೆ ನೀರು ನುಗ್ಗಿದೆ. ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಬೆಳೆ ಸಂಪೂರ್ಣ ಹಾಳಾಗಿದೆ. ಇನ್ನು ಕಮ್ಮರಚೇಡು ಗ್ರಾಮದಲ್ಲಿ ಕೂಡ ಉತ್ತಮ ಮಳೆಯಾಗಿದೆ. ಭಾರೀ ಮಳೆಯಿಂದ ಕೆರೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.