ಬಳ್ಳಾರಿ(ಅ. 26): ಆಸ್ಪತ್ರೆಯಿಂದ ನವಜಾತ ಶಿಶುವೊಂದು ನಾಪತ್ತೆಯಾದ ಘಟನೆ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ನವಜಾತ ಶಿಶು ನಾಪತ್ತೆಯಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ  

ಜಿಲ್ಲೆಯ ಕಂಪ್ಲಿ ತಾಲೂಕಿನ ಸಿಂಧವಾಳ ಗ್ರಾಮದ ಅನಿಲ್ ಹಾಗೂ ಲಲಿತಮ್ಮ ದಂಪತಿಗೆ ಸೇರಿದ ಮಗುವಾಗಿದೆ.  ಮೂರು ದಿನಗಳ ನವಜಾತ ಶಿಶುವನ್ನು ದುಷ್ಕರ್ಮಿಗಳು ಮೂರು ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಿಂದ ಕದ್ದೊಯ್ದಿದ್ದಾರೆ. ಈ ಸಂಬಂಧ ಆಸ್ಪತ್ರೆಯಲ್ಲಿನ ಸಿಸಿಟಿವಿ ವೀಡಿಯೋವನ್ನು ಜಿಲ್ಲಾಸ್ಪತ್ರೆಯ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.ನವಜಾತ ಶಿಶುವನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.