ಫಲಿತಾಂಶದ ದಿನನೇ ಮದುವೆ| ಎಂಟನೇ ವಾರ್ಡ್ ನ ರಾಜೇಶ ಮದುವೆ| ಇಂದೇ ರಿಸಲ್ಟ್ ಇಂದೇ ಮದುವೆ| ಇಂದು ಚುನಾವಣೆಯ ಫಲಿತಾಂಶ ಪ್ರಕಟ|

ಬಳ್ಳಾರಿ[ನ.14]: ಕಂಪ್ಲಿ ಪುರಸಭೆ ಚುನಾವಣೆಯ ಎಂಟನೇ ವಾರ್ಡ್ ನ ಕಾಂಗ್ರೆಸ್ ಅಭ್ಯರ್ಥಿಗೆ ಎರಡು ವಿಷಯದಲ್ಲಿ ಟೆನ್ಷನ್ ಸ್ಟಾರ್ಟ್ ಆಗಿದೆ. ಹೌದು, ಕಾಂಗ್ರೆಸ್ ಅಭ್ಯರ್ಥಿ ರಾಜೇಶ ಅವರ ಮದುವೆ ಹಾಗೂ ಚುನಾವಣೆಯ ಫಲಿತಾಂಶ ಕೂಡ ಇಂದೇ ಇದೆ. ಹೀಗಾಗಿ ರಾಜೇಶ ಅವರಿಗೆ ಒಂದು ಕಡೆ ಮದುವೆಯ ಖುಷಿ ಆದರೆ, ಮತ್ತೊಂದು ಕಡೆ ಚುನಾವಣೆಯ ಫಲಿತಾಂಶದ ಭಯ ಆಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚುನಾವಣೆಯಲ್ಲಿ ರಾಜೇಶ ಅವರು ಗೆದ್ದಿದ್ದೆ ಆದರೆ, ವಾರ್ಡ್ ಮತದಾರ ರಾಜೇಶ ಅವರಿಗೆ ಮದುವೆಗೆ ಸ್ಪೆಷಲ್ ಗಿಫ್ಟ್ ನೀಡಿದ ಹಾಗೆ ಆಗುತ್ತದೆ. 

ರಾಜ್ಯದ ಎರಡು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಒಟ್ಟು 409 ವಾರ್ಡ್‌ಗಳಿಗೆ ಮಂಗಳವಾರ ಮತದಾನ ನಡೆದಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ 8 ರಿಂದ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು. ಇದಕ್ಕಾಗಿ ರಾಜ್ಯ ಚುನಾವಣಾ ಆಯೋಗವು ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ತಾಲೂಕು ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ಇವಿಎಂಗಳನ್ನು ಇಡಲಾಗಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭದ್ರತೆಯ ನೇತೃತ್ವವನ್ನು ವಹಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಎರಡು ಮಹಾನಗರ ಪಾಲಿಕೆಯ 105, ಆರು ನಗರ ಸಭೆಗಳ 194, ಮೂರು ಪುರಸಭೆಗಳ 69, 3 ಪಟ್ಟಣ ಪಂಚಾಯಿತಿಗಳ 50 ಸೇರಿದಂತೆ 418 ವಾರ್ಡ್‌ಗಳ ಪೈಕಿ 409 ವಾರ್ಡ್‌ಗಳಿಗೆ ಚುನಾವಣೆ ನಡೆದಿದೆ.