ಬಳ್ಳಾರಿ[ನ.3]: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಅಟಲ್‌ ಬಿಹಾರಿ ವಾಜಪೇಯಿ ಝೂಲಾಜಿಕಲ್‌ ಪಾರ್ಕ್ ನಲ್ಲಿ ಹಂಪಿ ಮೃಗಾಲಯವನ್ನು ಶನಿವಾರ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್‌ ಅವರು ಉದ್ಘಾಟಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಟಲ್‌ ಬಿಹಾರಿ ವಾಜಪೇಯಿ ಝೂಲಾಜಿಕಲ್‌ ಪಾರ್ಕ್ ಅಭಿವೃದ್ಧಿಪಡಿಸಲು 65.43 ಕೋಟಿ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿದೆ. ಮುಂಬರುವ ದಿನಗಳಲ್ಲಿ ಮೈಸೂರು ಮೃಗಾಲಯದಂತೆ ಕೇಂದ್ರೀಯ ಮೃಗಾಲಯ ಪ್ರಾಧಿಕಾರವು ಮಾಸ್ಟರ್‌ ಪ್ಲಾನ್‌ನಲ್ಲಿ ಪ್ರಾಣಿಗಳ ಸಂಗ್ರಹ ಯೋಜನೆ ಅನುಮೋದಿಸಿರುವಂತೆ ಈ ಪಾರ್ಕ್ ನಲ್ಲಿರುವ ಮೃಗಾಲಯಕ್ಕೆ ದೇಶ- ವಿದೇಶಗಳಿಂದ ಪ್ರಾಣಿಗಳನ್ನು ವಿನಿಮಯ ಮಾಡಿಕೊಂಡು ಅಭಿವೃದ್ಧಿ ಪಡಿಸಲಾಗುವುದು ಎಂದರು. ಈ ವೇಳೆ ಶಾಸಕ ಸೋಮಶೇಖರ ರೆಡ್ಡಿ, ಸಂಸದ ದೇವೇಂದ್ರಪ್ಪ ಸೇರಿದಂತೆ ಅನೇಕರು ಇದ್ದರು.